ಜ.16 ಲಸಿಕೆ ಅಭಿಯಾನಕ್ಜೆ ಮೋದಿ‌ ಚಾಲನೆ:ಕಾರ್ಯಕರ್ತರ ಜತೆ ಸಂವಾದ

ನವದೆಹಲಿ , ಜ 14- ಈ ತಿಂಗಳ 16ರಂದು ದೇಶಾದ್ಯಂತ ಕೋವಿಡ್- 19 ಲಸಿಕೆ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇದೇ ಸಂಧರ್ಭದಲ್ಲಿ ಕೆಲವು ಆರೋಗ್ಯ ಕಾರ್ಯಕರ್ತರೊಂದಿಗೆ ಸಂವಹನ ನಡೆಸುವ ಸಾಧ್ಯತೆ ಇದೆ ಮೂಲಗಳು ತಿಳಿಸಿವೆ.
ಲಸಿಕೆ ವಿತರಣೆ ಹಾಗೂ ವಿತರಣೆಯ ನೈಜ ಸಮಯದ ಮೇಲ್ವಿಚಾರಣೆಗಾಗಿ ರಚಿಸಲಾದ ಡಿಜಿಟಲ್ ಪ್ಲಾಟ್ ಫಾರಂ ಕೋ-ವಿನ್ ಅ್ಯಪ್ ಗೆ ಮೋದಿ ಚಾಲನೆ ನೀಡಲಿದ್ದಾರೆ.
2,934 ಲಸಿಕೆ ವಿತರಣಾ ಕೇಂದ್ರಗಳಲ್ಲಿ ಸೀಮಿತ ಸಂಖ್ಯೆಯ ಕೇಂದ್ರಗಳ ಪಟ್ಟಿ ಮಾಡಲಾಗಿದ್ದು, ಅಲ್ಲಿಂದ ಮೋದಿ ಜತೆ ಸಂವಾದ ನಡೆಸಬಹುದಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
1.65 ಕೋಟಿ ಡೋಸ್ ಗಳಾದ ಕೋವಿಶೀಲ್ಡ್ ಮತ್ತು ಕೊವಾಕ್ಸಿನ್ ಲಸಿಕೆಯನ್ನು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಅಲ್ಲಿನ ಆರೋಗ್ಯ ಕಾರ್ಯಕರ್ತರ ದತ್ತ ಸಂಚಯಕ್ಕೆ ಅನುಗುಣವಾಗಿ ಹಂಚಿಕೆ ಮಾಡಲಾಗಿದೆ ಎಂದು ಅವರು ಹೇಳಿದರು.