ಜ. 19 ರಂದು ಮಹಾಯೋಗಿ ವೇಮನ ಜಯಂತಿ

ಕಲಬುರಗಿ,ಜ.11: ಜಿಲ್ಲಾಡಳಿತ ವತಿಯಿಂದ ಇದೇ ಜನವರಿ 19 ರಂದು ಬೆಳಿಗ್ಗೆ 11.30 ಗಂಟೆಗೆ ಡಾ.ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಶ್ರೀ ಮಹಾಯೋಗಿ ವೇಮನ ಅವರ ಜಯಂತಿನ್ನು ಅದ್ದೂರಿಯಾಗಿ ಆಚರಿಸಲು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.
ಅಧಿಕಾರಿಗಳು ತಮಗೆ ನೀಡಿದ ಕೆಲಸಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಜಿಲ್ಲಾಧಿಕಾರಿಗಳ ಕಚೇರಿ ಶಿಷ್ಠಾಚಾರ ತಹಶೀಲ್ದಾರ ನೀಸರ ಅಹ್ಮದ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ವೇದಿಕೆ ಒಬ್ಬ ಸಮಿತಿ ಅಧ್ಯಕ್ಷರನ್ನು ಹಾಗೂ ಉಪನ್ಯಾಸಕರನ್ನು ನೇಮಕ ಮಾಡಲು ಸಭೆಯಲ್ಲಿ ನಿರ್ಧರಿಸಲಾಯಿತು. ಕನ್ನಡ ಮತ್ತು ಸಂಸ್ಕøತಿಯ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಅವರು ಮಾತನಾಡಿ, ಸಂಗೀತ ಕಾರ್ಯಕ್ರಮಗಳು ಜರಗಲಿವೆ ವೇದಿಕೆ ಅಲಂಕಾರ ಮಾಡಲಾಗುವುದು ಬ್ಯಾನರ್‍ಗಳ ಆಮಂತ್ರಣ ಪತ್ರಗಳು ಮುದ್ರಿಸಲಾಗುವುದು ಎಂದು ಸಭೆಯಲ್ಲಿ ತಿಳಿಸಿದರು.
ಸರಕಾರಿ ಅರೆ ಸರಕಾರಿ ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಬೆಳಿಗ್ಗೆ 9 ಗಂಟೆಗೆ ಆಚರಿಸಬೇಕೆಂದರು. ಶ್ರೀ ಮಹಾಯೋಗಿ ವೇಮನ ಜಯಂತಿ ಸಂಘದ ಅಧ್ಯಕ್ಷ ಚನ್ನಾರೆಡ್ಡಿ ಪಾಟೀಲ ಅವರು ಸಭೆಯಲ್ಲಿ ಮಹಾಯೋಗಿ ವೇಮನ ಅವರ ಪುಸ್ತಕಗಳನ್ನು ಬಿಡುಗಡೆಗೊಳಿಸಲು ತಿಳಿಸಿದರು. ವೇದಿಕೆ ಮೇಲೆ ಸಮಿತಿ ಅಧ್ಯಕ್ಷರನ್ನು ಶಹಾಪೂರ ಶಾಸಕ ಶರಣಬಸಪ್ಪ ದರ್ಶನಾಪೂರ ನೇಮಿಸಲಾಯಿತು.
ಸಭೆಯಲ್ಲಿ ಅಧಿಕಾರಿಗಳು ಮಹಾಯೋಗಿ ವೇಮನ ಜಯಂತಿ ಸಂಘದ ಸೂರ್ಯಕಂತ ರೆಡ್ಡಿ, ಸುನೀಲ ಕುಮಾರ ರೆಡ್ಡಿ, ಗುರುರಾಜ್ ರೆಡ್ಡ, ದೇವಿಂದ್ರ ರೆಡ್ಡಿ ಉಪಸ್ಥಿತರಿದರು.