ಜ.20 ರಿಂದ ಗ್ಲೋಬಲ್ ಬ್ಯುಸಿನೆಸ್ ಸಮ್ಮೇಳನ

ಹುಬ್ಬಳ್ಳಿ,ನ19: ಅಂತಾರಾಷ್ಟ್ರೀಯ ಲಿಂಗಾಯತ ಯುವ ವೇದಿಕೆ ಹುಬ್ಬಳ್ಳಿ ಘಟಕದಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜ.20 ರಿಂದ 22 ರವರೆಗೆ ಮೂರು ದಿನಗಳ ಕಾಲ ವೀರಶೈವ ಲಿಂಗಾಯತ ಗ್ಲೋಬಲ್ ಬ್ಯುಸಿನೆಸ್ ಸಮ್ಮೇಳನ ಆಯೋಜಿಸಲಾಗಿದೆ ಎಂದು ವೇದಿಕೆಯ ಸಂಸ್ಥಾಪಕ ಸಂತೋಷ ಕೆಂಚಾಂಬ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲ ವೀರಶೈವ ಲಿಂಗಾಯತ ಸಮುದಾಯದ ಉದ್ಯಮಗಳನ್ನು ವೃತ್ತಿಪರರನ್ನು ಒಂದೇ ವೇದಿಕೆಯಲ್ಲಿ ತರುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ನವ ಉದ್ಯಮಕ್ಕೆ ಒತ್ತನ್ನು ನೀಡುವ ಜೊತೆಗೆ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಲು ಸಮ್ಮೇಳನದಲ್ಲಿ ಉದ್ಯೋಗ ಮೇಳವನ್ನು ಈ ಸಂದರ್ಭದಲ್ಲಿ ನಡೆಸಲಾಗುವುದು ಎಂದು ತಿಳಿಸಿದರು.
ಸಮ್ಮೇಳನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟನೆ ಮಾಡಲಿದ್ದು, ನೂರಾರು ಉದ್ಯಮಿಗಳು, ಸಾವಿರಾರು ಜನರು ಭಾಗವಹಿಸಲಿದ್ದಾರೆ. 250 ಕ್ಕೂ ಹೆಚ್ಚು ಅಧಿಕ ಮಳಿಗೆ ಇರಲಿವೆ. ಕೃಷಿ ಸಮೂದಾಯಕ್ಕೆ ತಂತ್ರಜ್ಞಾನ ಆಧಾರಿತ ಕೃಷಿ ಪರಿಹಾರಗಳನ್ನು ಅನ್ವೇಷಿಸಲು ಸಮ್ಮೇಳನ ನೇರವಾಗಲಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ರವಿರಾಜ ಕಮ್ಮಾರ, ಅಶ್ವೀನ್ ಪಾಳೆಗಾರ, ಸಿದ್ದು ಮಠದ ಸೇರಿದಂತೆ ಮುಂತಾದವರು ಇದ್ದರು.