ಜ.21ರಂದು ಅಂಬಿಗರ ಚೌಡಯ್ಯ ಜಯಂತಿ

ಚಿತ್ರದುರ್ಗ.ಜ.೧೦; ಇದೇ ಜನವರಿ 21ರಂದು ಅಂಬಿಗರ ಚೌಡಯ್ಯ ಜಯಂತಿ ಆಚರಿಸುವ ಸಂಬಂಧ ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ಜಿಲ್ಲಾ ಗಂಗಾಭಿಕ ಬೆಸ್ತರ ಸಂಘದ ಅಧ್ಯಕ್ಷ ಹೆಚ್.ಡಿ.ರಂಗಯ್ಯ ಮಾತನಾಡಿ, ಅಂಬಿಗರ ಚೌಡಯ್ಯ ಜಯಂತಿ ಆಚರಿಸುವ ಸಂಬಂಧ ಸ್ಥಳ ನಿಗಧಿಯನ್ನು ಸಂಘದ ವತಿಯಿಂದ ತೀರ್ಮಾನಿಸಿ, ಇನ್ನೂ ಎರಡು ದಿನಗಳಲ್ಲಿ ಅಂತಿಮಗೊಳಿಸಲಾಗುವುದು. ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣ ಅಥವಾ ತರಾಸು ರಂಗಮಂದಿರದಲ್ಲಿ ಎರಡು ಸ್ಥಳಗಳಲ್ಲಿ ಯಾವುದಾದರೂ ಒಂದು ಸ್ಥಳವನ್ನು ಅಂತಿಮಗೊಳಿಸಲಾಗುವುದು ಎಂದು ಸಭೆಯ ಗಮನಕ್ಕೆ ತಂದ ಅವರು, ಅಂಬಿಗರ ಚೌಡಯ್ಯ ಜಯಂತಿ ಅಂಗವಾಗಿ ವಿಶೇಷ ಉಪನ್ಯಾಸ ನೀಡುವ ಸಂಪನ್ಮೂಲ ವ್ಯಕ್ತಿಯ ಹೆಸರನ್ನೂ ಸಂಘದ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಹೇಳಿದರು.ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ, ಜಿಲ್ಲಾ ಗಂಗಾಭಿಕ ಬೆಸ್ತರ ಸಂಘದ ಉಪಾಧ್ಯಕ್ಷ ಎಸ್.ಕೃಷ್ಣಮೂರ್ತಿ, ಕಾರ್ಯದರ್ಶಿ ಪಿ.ಶ್ರೀನಿವಾಸ್, ನಿರ್ದೇಶಕರಾದ ಹೆಚ್.ರಂಗನಾಥ್, ಮಂಜುನಾಥ್, ಕುಮಾರಸ್ವಾಮಿ, ಜಯಣ್ಣ, ಜೆ.ಮಹೇಶ್, ನಾಗೇಂದ್ರಪ್ಪ, ಬಿ.ರಾಜು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.