ಜ.21ರಂದು ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’


ಸಂಜೆವಾಣಿ ವಾರ್ತೆ
ಹೊಸಪೇಟೆ, ಜ.18: ವಿಜಯನಗರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಜ.21ರಂದು ಪುರಂದರ ಉತ್ಸವ ಮತ್ತು ಜನವರಿ 27 ರಿಂದ 29 ರವರೆಗೆ ನಡೆಯುವ ಹಂಪಿ  ಉತ್ಸವ ಕಾರ್ಯಕ್ರಮ ಪೂರ್ವ ತಯಾರಿ ಕೈಗೊಳ್ಳುವುದು ಅಗತ್ಯವಿರುವುದರಿಂದ ಜನವರಿಯಲ್ಲಿ ನಡೆಯಬೇಕಾದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಹೊಸಪೇಟೆ ಕಾರ್ಯಕ್ರಮವನ್ನು ಫೆಬ್ರವರಿ ತಿಂಗಳಿನಿಂದ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
ಉಳಿದಂತೆ ಜ.21ರಂದು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಜರುಗಲಿರುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಆಯಾ ತಾಲೂಕು ತಹಶೀಲ್ದಾರರು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ವಿವಿಧೆಡೆ ವಾಸ್ತವ್ಯದ ವಿವರ: ಜ.21 ರಂದು ಹರಪನಹಳ್ಳಿ ತಾಲೂಕಿನ ಚಿಗಟೇರಿ ಹೋಬಳಿಯ ನಂದಿಬೇವೂರು ಗ್ರಾಮದಲ್ಲಿ ತಾಲೂಕಿನ ತಹಶೀಲ್ದಾರರು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಹೂವಿನಹಡಗಲಿ ತಾಲೂಕಿನ ಹೂವಿನಹಡಗಲಿ ಹೋಬಳಿಯ ನವಲಿ ಗ್ರಾಮದಲ್ಲಿ ತಹಶೀಲ್ದಾರರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಹಗರಿಬೊಮ್ಮನಹಳ್ಳಿ ತಾಲೂಕಿನ ಹಗರಿಬೊಮ್ಮನಹಳ್ಳಿ ಹೋಬಳಿಯ ಗುಳೇದಾಳು ಗ್ರಾಮದಲ್ಲಿ ತಾಲೂಕಿನ ತಹಶೀಲ್ದಾರರು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಕೊಟ್ಟೂರು ತಾಲೂಕಿನ ಕೊಟ್ಟೂರು ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ತಾಲೂಕಿನ ತಹಶೀಲ್ದಾರರು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಕೂಡ್ಲಿಗಿ ತಾಲೂಕಿನ ಕೂಡ್ಲಿಗಿ ಹೋಬಳಿಯ ಶಿವಪುರ ಗ್ರಾಮದಲ್ಲಿ ತಾಲೂಕಿನ ತಹಸೀಲ್ದಾರರು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಗ್ರಾಮ ವ್ಯಾಸ್ತವ್ಯ ಮಾಡುವರು. ಗ್ರಾಮ ವಾಸ್ತವ್ಯದಲ್ಲಿ ಸಾರ್ವಜನಿಕರು ತಮ್ಮ ಆಹವಾಲುಗಳಿದ್ದಲ್ಲಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದರು.