ಜ. 21 ರಂದು “ಆಯುಕ್ತರ ನಡೆ ವಾರ್ಡ್ ಕಡೆ”

ಕಲಬುರಗಿ,ಜ.19:ಕಲಬುರಗಿ ನಗರದ ಸಾರ್ವಜನಿಕರ ಕುಂದುಕೊರತೆಗಳನ್ನು ಸ್ಥಳದಲ್ಲಿಯೇ ಬಗೆಹರಿಸುವ ಪ್ರಯುಕ್ತ “ಆಯುಕ್ತರ ನಡೆ ವಾರ್ಡ್ ಕಡೆ” ಕಾರ್ಯಕ್ರಮವನ್ನು ಇದೇ ಜನವರಿ 21 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಹಾನಗರ ಪಾಲಿಕೆಯ ವಾರ್ಡ್ ಸಂಖ್ಯೆ 53ರ ಗಣೇಶ ನಗರದ ಸಿದ್ಧಾರೂಡ ಮಠದ ಆವರಣದಲ್ಲಿ ಜರುಗಲಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.

ಸದರಿ ವಾರ್ಡಿಗೆ ಸಂಬಂಧಪಟ್ಟ ಸಾರ್ವಜನಿಕರು ಮೇಲ್ಕಂಡ ದಿನದಂದು ಹಾಜರಾಗಿ ತಮ್ಮ ಕುಂದುಕೊರತೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.