ಜ.22 ರಂದು ಜಯನಗರ ಶಿವಮಂದಿರದಲ್ಲಿ ವಿಶೇಷ ಕಾರ್ಯಕ್ರಮ

ಕಲಬುರಗಿ:ಜ.21:ಅಯೋಧ್ಯೆಯಲ್ಲಿ ಜ.22 ರಂದು ಶ್ರೀರಾಮ ಪ್ರಾಣ ಪ್ರತಿಷ್ಠಾಪನ ದಿನದ ಅಂಗವಾಗಿ ಜಯನಗರ ಶಿವಮಂದಿರದಲ್ಲಿ ಜಯನಗರ ಶಿವಮಂದಿರ ಅಭಿವೃದ್ಧಿ ಟ್ರಸ್ಟ್ ವತಿಯಿಂದ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಲಿಂಗರಾಜ ಸಿರಗಾಪೂರ ತಿಳಿಸಿದ್ದಾರೆ.

ಅಂದು ಬೆಳಿಗ್ಗೆ 11 ಗಂಟೆಗೆ ಶ್ರೀರಾಮನ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ.ನಂತರ ಸಾಯಂಕಾಲ 7 ಗಂಟೆಗೆ ಶಿವಮಂದಿರದಲ್ಲಿ 500 ಹಣತೆಗಳನ್ನು ಹಚ್ಚಿ ದೀಪೆÇೀತ್ಸವ ನಡೆಸಲಾಗುತ್ತದೆ . ಅಂದೇ ಸಂಜೆ 7:30 ಗಂಟೆಗೆ ವಿಶೇಷ ಕಾರ್ಯಕ್ರಮ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ ಸಂಸ್ಕøತ ಪಂಡಿತ ಶ್ರೀ ಶಿವರುದ್ರಯ್ಯ ಮಠಪತಿ ಅವರಿಂದ ವಿಶೇಷ ಉಪನ್ಯಾಸ ನಡೆಯಲಿದೆ. ಟ್ರಸ್ಟ್ ಅಧ್ಯಕ್ಷ ಲಿಂಗರಾಜ ಸಿರಗಾಪೂರ ಸೇರಿದಂತೆ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಮತ್ತು ಮಹಿಳಾ ಘಟಕದ ಪದಾಧಿಕಾರಿಗಳು ಪಾಲ್ಗೋಳ್ಳುವರು.ಕಾರಣ ಭಕ್ತರು ಅಂದು ತಪ್ಪದೆ ಜಯನಗರ ಶಿವಮಂದಿರಕ್ಕೆ ಕುಟುಂಬ ಸಮೇತ ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕೆಂದು ಅವರು ಮನವಿ ಮಾಡಿದ್ದಾರೆ