ಜ. 23 ಕೋಲಾರಕ್ಕೆ ಕಾಂಗ್ರೇಸ್ ಪಕ್ಷದ ಪ್ರಜಾ ಧ್ವನಿ ಬಸ್ ಯಾತ್ರೆ

ಕೋಲಾರ, ಜ.೨೦- ಕೇಂದ್ರ ಮತ್ತು ರಾಜ್ಯದಲ್ಲಿನ ಬಿಜೆಪಿ ಸರ್ಕಾರಗಳ ದುರಾಡಳಿತ ಜನತೆಗೆ ತಿಳಿಸಲು ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಪ್ರಜಾಧ್ವನಿ ಬಸ್ ಯಾತ್ರೆ ಹಮ್ಮಿಕೊಂಡಿದೆ. ಜ.೨೩ರಂದು ಕೋಲಾರ ಜಿಲ್ಲೆಗೆ ಆಗಮಿಸಲಿದ್ದು ಯಶಸ್ವಿಗೊಳಿಸುವಂತೆ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಎಂ.ಆರ್.ಸೀತಾರಾಮ್ ತಿಳಿಸಿದರು.
ನಗರದ ಕಾಂಗ್ರೆಸ್ ಕಛೇರಿಯಲ್ಲಿ ಬುಧವಾರ ಪ್ರಜಾಧ್ವನಿ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ರಾಜ್ಯದ ಹಲವು ಕಡೆ ಈಗಾಗಲೇ ಪ್ರಜಾಧ್ವನಿ ಬಸ್ ಯಾತ್ರೆ ನಡೆಸಲಾಗಿದೆ. ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಹಾಗೆಯೇ ಕೋಲಾರದಲ್ಲಿ ಪ್ರಜಾಧ್ವನಿ ಯಾತ್ರೆ ಹಮ್ಮಿಕೊಂಡಿದ್ದು, ಜಿಲ್ಲೆಯ ಎಲ್ಲಾ ೬ ಕ್ಷೇತ್ರಗಳಲ್ಲೂ ಮತ್ತೊಮ್ಮೆ ಕಾಂಗ್ರೆಸ್ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮಾತ್ರವೇ ಸಾಮಾನ್ಯ ಜನರ ಉಳಿಯುತ್ತದೆ ಎಂಬುದು ಅರ್ಥವಾಗಿದೆ ಜನರಿಗೆ ಕಾಂಗ್ರೆಸ್ ಅಭಿವೃದ್ಧಿ ಬೇಕು ಹೊರತು ಬಿಜೆಪಿಯ ಪಕ್ಷದ ಶ್ರೀಮಂತರ ಅಭಿವೃದ್ಧಿಯಲ್ಲ ಪ್ರಜಾಧ್ವನಿ ಕಾರ್ಯಕ್ರಮದ ಮೂಲಕ ೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂಬುದನ್ನು ಜನ ತೋರಿಸಲಿದ್ದಾರೆ ಎಂದು ತಿಳಿಸಿದರು.
ಎಂಎಲ್‌ಸಿ ನಸೀರ್ ಅಹಮದ್ ಮಾತನಾಡಿ, ಕೋಲಾರ ವಿಧಾನ ಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ವರ್ಧೆ ವಿಚಾರವಾಗಿ ವಿರೋಧ ಪಕ್ಷದವರು ಏನೇ ಮಾತಾಡಿಕೊಳ್ಳಲಿ ನಮ್ಮ ಕೆಲಸ ಕಾಂಗ್ರೆಸ್ ಪಕ್ಷದ ಸಂಘಟನೆಯಾಗಬೇಕು, ಬಿಜೆಪಿ ಪಕ್ಷದ ಅಲ್ಪಸಂಖ್ಯಾತರ ವಿರೋಧಿ ಸರಕಾರವಾಗಿದೆ ಅದರಿಂದಲೇ ರಾಜ್ಯಾದ್ಯಂತ ನಡೆಸಿದ ಕಾಂಗ್ರೆಸ್ ಕಾರ್ಯಕ್ರಮಗಳಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಈ ಬಾರಿಯೂ ಜನರು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ನೀಡಲಿದ್ದಾರೆ. ಪ್ರಜಾಧ್ವನಿ ಬಸ್ ಯಾತ್ರೆಯ ಮೂಲಕ ಬಿಜೆಪಿಯ ದುರಾಡಳಿತವನ್ನು ಜನತೆಗೆ ಮನವರಿಕೆ ಮಾಡಿಕೊಡುತ್ತೇವೆ ಎಂದು ತಿಳಿಸಿದರು.
ಮಾಜಿ ಸ್ಪೀಕರ್ ರಮೇಶ್ ಕುಮಾರ್, ಶಾಸಕರಾದ ಎಸ್.ಎನ್.ನಾರಾಯಣಸ್ವಾಮಿ, ಕೆ.ವೈ.ನಂಜೇಗೌಡ, ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಮಾಜಿ ವಿಧಾನಪರಿಷತ್ ಸಭಾಪತಿ ವಿ.ಆರ್.ಸುದರ್ಶನ್, ಮಾಜಿ ಶಾಸಕ ಎ.ನಾಗರಾಜ್, ಮುಖಂಡರಾದ ಊರಬಾಗಿಲು ಶ್ರೀನಿವಾಸ್, ಜಯದೇವ್, ಮಂಜುನಾಥ್, ಸೀಸಂದ್ರ ಗೋಪಾಲಗೌಡ, ಲಕ್ಷ್ಮೀನಾರಾಯಣ್, ರಾಮಯ್ಯ, ರಾಜು ಶ್ರೀನಿವಾಸಪ್ಪ, ಮುರಳಿ, ಇಕ್ಬಾಲ್, ಜಗನ್ ಜಗದೀಶ್ ಇದ್ದರು