ಜ. 26 ರಂದು ಹೈಕೋರ್ಟ್ ಪೀಠದಲ್ಲಿ ಧ್ವಜಾರೋಹಣ

ಕಲಬುರಗಿ:ಜ.22:ಕಲಬುರಗಿ ಹೊರವಲಯದ ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠದಲ್ಲಿ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮವನ್ನು ಇದೇ ಜನವರಿ 26 ರಂದು ಬೆಳಿಗ್ಗೆ 9.30 ಗಂಟೆಗೆ ಜರುಗಲಿದೆ ಎಂದು ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠದ ಹೆಚ್ಚುವರಿ ರಿಜಿಸ್ಟ್ರಾರ್ ಜನರಲ್‍ರಾದ ಮರುಳಾಸಿದ್ಧರಾಧ್ಯ ಹೆಚ್.ಜಿ. ಅವರು ತಿಳಿಸಿದ್ದಾರೆ.
ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠದ ಹಿರಿಯ ನ್ಯಾಯಾಧೀಶರು ಧ್ವಜಾರೋಹಣ ನೆರವೇರಿಸುವರು. ಈ ಪೀಠದ ಇತರ ನ್ಯಾಯಾಧೀಶರು, ನ್ಯಾಯಾಂಗ ಇಲಾಖೆಯ ಅಧಿಕಾರಿಗಳು, ಕಚೇರಿ ಸಿಬ್ಬಂದಿ, ಕಲಬುರಗಿ ವಕೀಲರ ಸಂಘದ ಸದಸ್ಯರು ಹಾಗೂ ಸರ್ಕಾರಿ ನ್ಯಾಯವಾದಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.