ಜ. 29 ರಿಂದ ಬಜೆಟ್ ಅಧಿವೇಶನ ನಡೆಸಲು ಸಂಪುಟ ಸಮಿತಿ ಶಿಫಾರಸು

ನವದೆಹಲಿ, ಜ -5 ಈ ತಿಂಗಳ 29 ರಿಂದ ಸಂಸತ್ತಿನ ಬಜೆಟ್ ಅಧಿವೇಶನ ನಡೆಸಬೇಕೆಂದು ಸಂಸದೀಯ ವ್ಯವಹಾರಗಳ ಕುರಿತ ಸಂಪುಟ ಸಮಿತಿ ಶಿಫಾರಸು ಮಾಡಿದೆ.
ಈ ಸಂದರ್ಭದಲ್ಲಿ 2020-21 ನೇ ಸಾಲಿನ ಮುಂಗಡ ಪತ್ರ ಮಂಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಕೊರೊನಾ ಸೋಕಿನ ಹೊಡೆತಕ್ಕೆ ಸಿಲುಕಿ ಒಂದು ವರ್ಷದ ಬಳಿಕ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಮೊದಲ ಮುಂಗಡ ಪತ್ರ ಇದಾಗಿದೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈಗಾಗಲೇ ಸಿದ್ಧತೆ ಆರಂಭಿಸಿದ್ದು, ಉದ್ಯಮ ವಲಯದ ಮುಖ್ಯಸ್ಥರ ಜತೆ ಪೂರ್ವಭಾವಿ ಸಮಾಲೋಚನೆಗಳನ್ನು ಪೂರ್ಣಗೊಳಿಸಿದ್ದಾರೆ.
ಬಜೆಟ್ ಮಂಡನೆಗೆ ಮುನ್ನಡೆ ಆರ್ಥಿಕ ಸಮೀಕ್ಷೆಯನ್ನು ಸದನದಲ್ಲಿ ಸರ್ಕಾರ ಮಂಡಿಸಲಿದೆ.
ಸಂಪುಟ ಸಮಿತಿ ಶಿಫಾರಸ್ಸಿನ ಪ್ರಕಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜನವರಿ 29 ರಂದು ಸಂಸತ್ತಿನ ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಬಜೆಟ್ ಅಧಿವೇಶನದ ಮೊದಲ ಭಾಗವನ್ನು ಜನವರಿ 29 ರಿಂದ ಫೆಬ್ರವರಿ 15 ರವರೆಗೆ ನಡೆಸಬೇಕೆಂದು ಶಿಫಾರಸು ಮಾಡಿದ್ದು ಎರಡನೇ ಭಾಗವನ್ನು ಮಾರ್ಚ್ 8 ರಿಂದ ಏಪ್ರಿಲ್ 8 ರವರೆಗೆ ನಡೆಸಬಹುದೆಂದು ಹೇಳಿದೆ.