ಜ. 7 ರಂದು ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮ ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರ

ಕಲಬುರಗಿ,ಜ.6:ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ “ರಾಷ್ಟ್ರಿಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮ” ಕುರಿತು ಜಿಲ್ಲಾ ಮಟ್ಟದ ಒಂದು ದಿನದ ಕಾರ್ಯಾಗಾರದ ಉದ್ಘಾಟನಾ ಸಮಾರಂಭವನ್ನು ಇದೇ ಜನವರಿ 7 ರಂದು ಬೆಳಿಗ್ಗೆ 10.30 ಗಂಟೆಗೆ ಕಲಬುರಗಿ ನಗರದ ಸುಪರ ಮಾರ್ಕೇಟ್‍ನ ಶರಣಬಸವೇಶ್ವರ ಕೆರೆ ಹತ್ತಿರದಲ್ಲಿರುವ ಹೊಟೇಲ್ ಪೂರ್ಣಾನಂದ ಪ್ಯಾರಾಡೈಸ್‍ದಲ್ಲಿ ಏರ್ಪಡಿಸಲಾಗಿದೆ.

ಬೆಂಗಳೂರಿನ (ಆರ್.ಬಿ.ಎಸ್.ಕೆ., ಆರ್.ಕೆ.ಎಸ್.ಕೆ, ಶುಚಿ) ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಉಪನಿರ್ದೇಶಕರಾದ ಡಾ. ವೀಣಾ ವಿ. ಅವರು ಈ ಕಾರ್ಯಾಗಾರವನ್ನು ಉದ್ಘಾಟಿಸುವರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜಶೇಖರ ಮಾಲಿ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು.

ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಎ.ಎಸ್. ರುದ್ರವಾಡಿ, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ. ಪ್ರಭುಲಿಂಗ ಕೆ. ಮಾನಕರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಸಿದ್ದೇಶ್ವರಪ್ಪ ಜಿ.ಬಿ., ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವಶರಣಪ್ಪ ಮೂಳೇಗಾಂವ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಪಿ. ಬಾಡಂಗಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶಿವಶರಣಪ್ಪ, ಕಲಬುರಗಿ ಕ್ಷೇತ್ರ ಶಿಕ್ಷಣಾಧಿಕಾರಿ ವೀರಣ್ಣಾ ಬೊಮ್ಮನಳ್ಳಿ ಹಾಗೂ ಬೆಂಗಳೂರಿನ ಆರ್.ಕೆ.ಎಸ್.ಕೆ. ರಾಜ್ಯ ಸಲಹೆಗಾರ ಡಾ. ಸಿದ್ರಾಮ್ ಲಿಂಗದಳ್ಳಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಕಲಬುರಗಿಯ ಶ್ರೀ ಎಸ್.ಎಸ್.ಎಲ್. ಕಾನೂನು ಮಹಾವಿದ್ಯಾಲಯದ ಅತಿಥಿ ಉಪನ್ಯಾಸಕ ನರೇಂದ್ರ ಬಡಶೇಷಿ, ಉಪ ಪ್ರಾಂಶುಪಾಲ ಡಾ. ರೇಣುಕಾ ಗುಬ್ಬೇವಾಡ ಹಾಗೂ ಕಲಬುರಗಿ ರಾಷ್ಟ್ರೀಯ ಬಾಲ ಕಾರ್ಮಿಕರ ಯೋಜನಾ ಸಂಘದ ಜಿಲ್ಲಾ ಯೋಜನಾ ನಿರ್ದೇಶಕ ಸಂತೋಷ ಕುಲಕರ್ಣಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಳ್ಳುವರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯಕ್ರಮ ಅಧಿಕಾರಿಗಳು ಹಾಗೂ ತಾಲೂಕು ಅರೋಗ್ಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.