ಜ. 8 ರಿಂದ ರಾಜ್ಯ ಮಟ್ಟದ ಯುವಜನೋತ್ಸವ

ಕಲಬುರಗಿ,ಜ.7:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಎನ್.ಎಸ್.ಎಸ್. ಕೋಶ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಕೋಶ ಗುಲಬರ್ಗಾ ವಿಶ್ವವಿದ್ಯಾಲಯ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ “ರಾಷ್ಟ್ರೀಯ ಸೇವಾ ಯೋಜನೆ ರಾಜ್ಯಮಟ್ಟದ ಯವಜನೋತ್ಸವ” ಕಾರ್ಯಕ್ರಮವನ್ನು ಜ. 8 ರಿಂದ 11ರವರೆಗೆ ಗುಲಬರ್ಗಾ ವಿಶ್ವವಿದ್ಯಾಲಯದ ಜ್ಞಾನಗಂಗಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಇದೇ ಜನವರಿ 8 ರಂದು ಮಧ್ಯಾಹ್ನ 2 ಗಂಟೆಗೆ ಗುಲಬರ್ಗಾ ವಿಶ್ವವಿದ್ಯಾಲಯದ ಜ್ಞಾನಗಂಗಾ ಆವರಣದಲ್ಲಿ ಯುವಜನೋತ್ಸವ ಅಂಗವಾಗಿ ಸಾಂಸ್ಕøತಿಕ ಮೆರವಣಿಗೆಗೆ ಚಾಲನೆ ನೀಡಲಾಗುತ್ತದೆ. ಅಂದು ಮಧ್ಯಾಹ್ನ 3 ಗಂಟೆಗೆ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ ಅವರು ಯವಜನೋತ್ಸವ ಸಮಾರಂಭವನ್ನು ಉದ್ಘಾಟಿಸುವರು.
ಕಲಬುರಗಿ ಗುಲಬರ್ಗಾ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪೊ. ಚಂದ್ರಕಾಂತ ಎಂ. ಯಾತನೂರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಬೆಂಗಳೂರಿನ ಖ್ಯಾತ ಹಿನ್ನಲೆ ಗಾಯಕರು, ಸಾಹಿತಿಗಳು ಹಾಗೂ ಚಲನಚಿತ್ರ ನಟರಾದ ಗುರುರಾಜ ಹೊಸಕೋಟೆ ಮುಖ್ಯ ಅತಿಥಿಗಳಾಗಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಪ್ರಾದೇಶಿಕ ನಿರ್ದೇಶನಾಲಯದ ಪ್ರಾದೇಶಿಕ ನಿರ್ದೇಶಕ ಖಾದ್ರಾ ನರಸಿಂಹಯ್ಯ, ರಾಜ್ಯ ಎನ್.ಎಸ್.ಎಸ್. ಅಧಿಕಾರಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು, ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಅನುಷ್ಠಾಧಿಕಾರಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಡಾ. ಪೂರ್ಣಿಮಾ ಜೋಗಿ, ಗುಲಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆ ಪಲ್ಲವಿ ಪಾಟೀಲ ಹಾಗೂ ವಿದ್ಯಾವಿಷಯಕ ಸದಸ್ಯ ಪ್ರೊ. ಬಿ.ಎಂ. ಕನ್ನಹಳ್ಳಿ ಅವರು ಗೌರವಾನಿತರಾಗಿ ಉಪಸ್ಥಿತರಿರುವರು.
ಸಮಾರೋಪ ಸಮಾರಂಭ: ಇದೇ ಜನವರಿ 11 ರಂದು ಮಧ್ಯಾಹ್ನ 12 ಗಂಟೆಗೆ ಯುವಜನೋತ್ಸವದ ಸಮಾರೋಪ ಸಮಾರಂಭವು ಗುಲಬರ್ಗಾ ವಿಶ್ವವಿದ್ಯಾಲಯದ ಮಹಾತ್ಮಗಾಂಧಿ ಸಭಾಂಗಣದಲ್ಲಿ ಜರುಗಲಿದೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪಿ. ರಾಜಾ, ಗುಲಬರ್ಗಾ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ. ಚಂದ್ರಕಾಂತ ಎಂ. ಯಾತನೂರ ಅಧ್ಯಕ್ಷತೆ ವಹಿಸುವರು. ಕಲಬುರಗಿ ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತ ಮಹೇಶ ಪಾಟೀಲ, ರಾಜ್ಯ ಲೆಕ್ಕ ಮತ್ತು ಪರಿಶೋಧನಾ ಇಲಾಖೆಯ ಪ್ರಾದೇಶಿಕ ಕಚೇರಿಯ ಲೆಕ್ಕ ಪರಿಶೋಧನಾ ಅಧಿಕಾರಿ ಕವಿತಾ ಬಡಿಗೇರ್ ಅತಿಥಿಗಳಾಗಿ ಉಪಸ್ಥಿತರಿರುವರು.
ಗುಲಬರ್ಗಾ ವಿಶ್ವವಿದ್ಯಾಲಯದ (ಮೌಲ್ಯಮಾಪನ) ಕುಲಸಚಿವ ಡಾ. ಸಂಜೀವಕುಮಾರ ಕೆ.ಎಂ., ವಿತ್ತಾಧಿಕಾರಿ ಪ್ರೊ. ಬಿ. ವಿಜಯ, ಸಿಂಡಿಕೇಟ್ ಸದಸ್ಯೆ ಪ್ರತಿಭಾ ಚಾವಾ ಹಾಗೂ ವಿದ್ಯಾವಿಷಯಕ ಸದಸ್ಯ ಪ್ರೊ.ಕೆ. ಶ್ರೀರಾಮುಲು ಗೌರವಾನ್ವಿತರಾಗಿ ಪಾಲ್ಗೊಳ್ಳುವರು.