ಟಗರು ಪಲ್ಯ ಚಿತ್ರದ ಸೂರ್ಯಕಾಂತಿ ಹಾಡು ಬಿಡುಗಡೆ

ನಟ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ಪ್ರೇಮ್ ನಾಯಕಿಯಾಗಿ ಕಾಣಿಸಿಕೊಂಡಿರುವ ಚೊಚ್ಚಲ ಸಿನಿಮಾ “ ಟಗರು ಪಲ್ಯ” ಚಿತ್ರದ “ಸೂರ್ಯಕಾಂತಿ ನಾನು” ಹಾಡು ಬಿಡುಗಡೆಯಾಗಿದೆ.

ಡಾಲಿ ಧನಂಜಯ್ ನಿರ್ಮಾಣ ಮಾಡಿರುವ ಚಿತ್ರದ ಸೂರ್ಯಕಾಂತಿ ನಾನು ಎಂಬ ಮೆಲೋಡಿ ಹಾಡನ್ನು ಅನಾವರಣ ವಾಗಿದೆ. ಸ್ವತಃ ಧನಂಜಯ್ ಅವರೇ ಕ್ಯಾಚಿ ಮ್ಯಾಚಿ ಪದಗಳನ್ನು ಪೆÇಣಿಸಿ ಸಾಹಿತ್ಯ ಬರೆದಿದ್ದು, ಮಾಧುರಿ ಶೇಷಾದ್ರಿ ಹಾಡಿಗೆ ವಾಸುಕಿ ವೈಭವ್ ಸಂಗೀತ ನೀಡಿದ್ದಾರೆ.

ಉಮೇಶ್ ಕೆ ಕೃಪ ನಿರ್ದೇಶನ ಮಾಡಿದ್ದು ನಾಗಭೂಷಣ್ ಟಗರು ಪಲ್ಯದ ನಾಯಕ. ‘ಟಗರು ಪಲ್ಯ’ ಸಿನಿಮಾದಲ್ಲಿ ದೊಡ್ಡ ತಾರಾಬಳಗವೇ ಇದೆ.

ಹಿರಿಯ ಕಲಾವಿದರಾದ ರಂಗಾಯಣ ರಘು, ತಾರಾ, ಶರತ್ ಲೋಹಿತಾಶ್ವ ಸೇರಿದಂತೆ ದೊಡ್ಡ ಸ್ಟಾರ್ ಕಾಸ್ಟ್  ಚಿತ್ರಕ್ಕೆ ಸಾಥ್ ಕೊಟ್ಟಿದೆ. ಎಸ್.ಕೆ.ರಾವ್ ಕ್ಯಾಮೆರಾ ಚಿತ್ರಕ್ಕಿದೆ. ಇದೇ ವರ್ಷದ ಕನ್ನಡ ರಾಜ್ಯೋತ್ಸವಕ್ಕೆ ಚಿತ್ರ ಬಿಡುಗಡೆಯಾಗುವ ಸಾಧ್ಯತೆ ಇದೆ.