ಟರ್ಮಿನಲ್ 2 ಜಗತ್ತಿನ ಸುಂದರ ವಿಮಾನ ನಿಲ್ದಾಣ

ಬೆಂಗಳೂರು, ಡಿ.೨೨- ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ದ ಟರ್ಮಿನಲ್-೨, ವಿಶ್ವದ ಅತ್ಯಂತ ಸುಂದರ ವಿಮಾನ ನಿಲ್ದಾಣಗಳಲ್ಲಿ ಒಂದೆಂಬ ಹಿರಿಮೆಗೆ ಪಾತ್ರವಾಗಿದೆ.
ವಿಶ್ವಸಂಸ್ಥೆಯ ಅಂಗಸಂಸ್ಥೆಯಾದ ಯುನೆಸ್ಕೋ ನೀಡುವ ಪ್ರಿಕ್ಸ್ ವರ್ಸೈಲ್ಸ್ ಟರ್ಮಿನಲ್-೨ ಗೌರವಕ್ಕೆ ಪಾತ್ರವಾಗಿದ್ದು, ಈ ಗೌರವಕ್ಕೆ ಪಾತ್ರವಾದ ಮೊದಲ ನಿಲ್ದಾಣ ಎಂಬ ಹಿರಿಮೆಯೂ ದಕ್ಕಿದೆ.
೨,೫೫,೬೬೧ ಚದರ ಮೀಟರ್ ವಿಸ್ತೀರ್ಣದಲ್ಲಿರುವ ಟರ್ಮಿನಲ್-೨ ಅನ್ನು ೪ ಬೃಹತ್ ಅಡಿಪಾಯದ ಕಂಬಗಳ ಮೇಲೆ ನಿರ್ಮಾಣವಾಗಿದೆ. ಇಲ್ಲಿನ ಉದ್ಯಾನ ಬಹು ಆಕರ್ಷಣೀಯವಾಗಿದ್ದು, ಇಲ್ಲಿ ಪರಿಸರ ಮತ್ತು ಕರ್ನಾಟಕದ ಶ್ರೀಮಂತ ಪರಂಪರೆ, ಸಂಸ್ಕೃತಿ, ಆಚರಣೆಗಳನ್ನು ಕಾಣಬಹುದಾಗಿದೆ.
ಈ ಟರ್ಮಿನಲ್-೨ನ ಮೊದಲ ಹಂತವು ನ.೧೧, ೨೦೨೨ರಂದು ಉದ್ಘಾಟನೆಯಾಗಿದೆ. ಇದು ವರ್ಷಕ್ಕೆ ೨.೫ ಕೋಟಿ ಪ್ರಯಾಣಿಕರನ್ನು ನಿರ್ವಹಿಸುತ್ತದೆ.