ಟಾಕ್ಸಿಕ್ ಚಿತ್ರದಲ್ಲಿ ಯಶ್ ಜೊತೆ ಕರೀನಾ ನಟನೆ

ಬೆಂಗಳೂರು ,ಮಾ.೧೮-ಕೆಜಿಎಫ್’ ಸ್ಟಾರ್ ಯಶ್ ಅಭಿನಯದ ’ಟಾಕ್ಸಿಕ್’ ಚಿತ್ರದಲ್ಲಿ ಕರೀನಾ ಕಪೂರ್ ಖಾನ್ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಕರೀನಾ ’ಟಾಕ್ಸಿಕ್’ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲಿದ್ದು, ಶೀಘ್ರದಲ್ಲೇ ಘೋಷಣೆ ಹೊರಬೀಳಲಿದೆ. ಇತ್ತೀಚೆಗೆ ’ಟಾಕ್ಸಿಕ್’ ಚಿತ್ರದ ಯಶ್ ಅವರ ಲುಕ್ ರಿವೀಲ್ ಆಗಿದ್ದು, ಈ ಚಿತ್ರ ೨೦೨೫ರಲ್ಲಿ ಬಿಡುಗಡೆಯಾಗಲಿದೆ.
ನಟ ರಾಕಿಂಗ್ ಸ್ಟಾರ್ ಯಶ್ ನಟಿಸಲಿರುವ ಟಾಕ್ಸಿಕ್ ಚಿತ್ರದಲ್ಲಿ ನಟಿಸುವ ಮೂಲಕ
ಬಾಲಿವುಡ್‌ನ ಬೆಬೋ ಅಂದರೆ ಕರೀನಾ ಕಪೂರ್ ಖಾನ್
ದಕ್ಷಿಣ ಭಾರತೀಯ ಸಿನಿಮಾ ಇಂಡಸ್ಟ್ರಿಗೆ ಕಾಲಿಡಲಿದ್ದಾರೆಂಬ ಸುದ್ದಿ ಹೆಚ್ಚು ಸದ್ದು ಮಾಡಿದೆ. ಸದ್ಯ ಈ ವಿಷಯದ ಬಗ್ಗೆ ಸ್ವತಃ ಬಿಟೌನ್ ಬೆಡಗಿ ಕರೀನಾ ಕಪೂರ್ ಸ್ಪಷ್ಟಪಡಿಸಿದ್ದಾರೆ.
ಬಿಟೌನ್ ಬೋಲ್ಡ್ ಸುಂದರಿ ಕರೀನಾ ಕಪೂರ್ ಟಾಕ್ಸಿಕ್ ಚಿತ್ರದ ಹೆಸರು ಹೇಳದೆ ದಕ್ಷಿಣ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿರುವುದರ ಬಗ್ಗೆ ಖಚಿತ ಮಾಹಿತಿಯನ್ನು ನೀಡಿದ್ದಾರೆ.
ಸೌತ್ ಸಿನಿಮಾದಲ್ಲಿ ಕರೀನಾ ಕಪೂರ್ ನೋಡಲು ಅಭಿಮಾನಿಗಳ ಕೂಡ ಕಾತುರದಿಂದ ಕಾಯುತ್ತಿದ್ದಾರೆ, ಈ ನಡುವೆ ನಟಿ ಸೌತ್ ಬಿಗ್ ಬಜೆಟ್ ಚಿತ್ರದಲ್ಲಿ ನಟಿಸುತ್ತಿರುವುದರ ಬಗ್ಗೆ ಸ್ಪಷನೆ ನೀಡಿದ್ದಾರೆ.
ಇದಕ್ಕೂ ಎರಡು ತಿಂಗಳ ಹಿಂದೆಯಷ್ಟೇ ಕರೀನಾ ಕಪೂರ್ ಯಶ್ ಟಾಕ್ಸಿಕ್ ಚಿತ್ರದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸಲಿದ್ದಾರೆ ಎಂದು ವರದಿಯಾಗಿತ್ತು. ಈ ಸಿನಿಮಾದ ನಿರ್ಮಾಪಕರು ಕೂಡ ಕರೀನಾ ಜೊತೆ ಮಾತುಕತೆ ನಡೆಸಿದ್ದು, ಇದೀಗ ಈ ನಟಿ ಸಹ ಒಪ್ಪಿಗೆ ನೀಡಿದ್ದಾರೆ. ಬಿಟೌನ್ ಬೋಲ್ಡ್ ಸುಂದರಿ ಕರೀನಾ ಕಪೂರ್ ಟಾಕ್ಸಿಕ್ ಚಿತ್ರದ ಹೆಸರು ಹೇಳದೆ ದಕ್ಷಿಣ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿರುವುದರ ಬಗ್ಗೆ ಖಚಿತ ಮಾಹಿತಿಯನ್ನು ನೀಡಿದ್ದಾರೆ.
ಬಾಲಿವುಡ್ ನಟಿ ಕರೀನಾ ಕಪೂರ್, ವಿಡಿಯೋವೊಂದರಲ್ಲಿ ನಾನು ಬಿಗ್ ಬಜೆಟ್ ಸೌತ್ ಸಿನಿಮಾ ಮಾಡುತ್ತಿದ್ದೇನೆ. ಸದ್ಯ ಆ ಸಿನಿಮಾ ಭಾರತದಾದ್ಯಂತ ಸದ್ದು ಮಾಡಿದೆ .ನಾನು ಎಲ್ಲಿ ಶೂಟಿಂಗ್ ಮಾಡುತ್ತೇನೆ ಎಂದು ನನಗೆ ಗೊತ್ತಿಲ್ಲ. ಆದರೆ ನಾನು ಇದೇ ಮೊದಲ ಬಾರಿಗೆ ಸೌತ್ ಸಿನಿಮಾದಲ್ಲಿ ನಟಿಸುತ್ತಿದ್ದೇನೆ. ನನ್ನ ಅಭಿಮಾನಿಗಳು ಹೇಗೆ ಸ್ವೀಕರಿಸುತ್ತಾರೆ ಎನ್ನುವುದನ್ನು ನೋಡಲು ಉತ್ಸುಕಳಾಗಿರುವೆ ಎಂದು ಹೇಳಿದ್ದಾರೆ.
ಶೀಘ್ರದಲ್ಲೇ ಟಾಕ್ಸಿಕ್ ಸಿನಿಮಾ ಡೈರೆಕ್ಟರ್ ಗೀತು ಮೋಹನ್ ದಾಸ್ ಬಾಲಿವುಡ್ ನಟಿ ಕರೀನಾ ಕಪೂರ್ ಸಿನಿತಂಡ ಸೇರ್ಪಡೆ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ. ಟಾಕ್ಸಿಕ್ ಚಿತ್ರದ ಶೂಟಿಂಗ್ ಇನ್ನೇನು ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದ್ದು, ಈ ಸಿನಿಮಾದ ಟೀಸರ್ ನೋಡಿದ ಫ್ಯಾನ್ಸ್ ಬೆಟ್ಟದಷ್ಟು ಭರವಸೆ ಇಟ್ಟುಕೊಂಡಿದ್ದಾರೆ. ಈ ಚಿತ್ರದಲ್ಲಿ ನಟ ಯಶ್ ಹಿಂದೆಂದೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ, ಈ ಸಿನಿಮಾವನ್ನು ೨೦೨೫ ರಲ್ಲಿ ಏಪ್ರಿಲ್ ನಲ್ಲಿ ಬಿಡುಗಡೆ ಮಾಡುವುದಾಗಿ ಚಿತ್ರ ತಂಡ ಹೇಳಿದೆ.