ಟಿಕೆಟ್ ಹಂಚಿಕೆ ಗೊಂದಲವಿಲ್ಲ: ಜೋಶಿ

ಬೆಳಗಾವಿ, ಏ3: ರಾಜ್ಯ ವಿಧಾನಸಭೆ ಚುನಾವಣೆ ಟಿಕೆಟ್ ಹಂಚಿಕೆ ವಿಷಯವಾಗಿ ರಾಜ್ಯ ಬಿಜೆಪಿಯಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟವಾಗಿ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಮತ್ತು ಬೆಂಗಳೂರು ಅತಿ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಜಿಲ್ಲೆಗಳಾಗಿದ್ದು, ಈ ಜಿಲ್ಲೆಗಳಲ್ಲಿ ಹೆಚ್ಚಿನ ಮಾಹಿತಿ ಸಂಗ್ರಹಿಸಿ ನಿರ್ಧರಿಸಲಾಗುವುದು ಎಂದು ಹೇಳಿದರು.
ಜಿಲ್ಲೆಯಲ್ಲಿ ಯಾವುದೇ ಗದ್ದಲ ಗಲಾಟೆ ಇಲ್ಲ, ಪೈಪೋಟಿ ಇತ್ಯಾದಿ ಸುದ್ದಿಗಳು ಮಾಧ್ಯಮದವರ ಸೃಷ್ಟಿ ಎಂದು ಅವರು ಹೇಳಿದರು.