ಟಿಕೆಟ್ ಹಂಚಿಕೆ ನಡ್ಡಾ ಚರ್ಚೆ

ಬಳ್ಳಾರಿ,ಮಾ.೧೮: ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಬಳ್ಳಾರಿಯ ಖಾಸಗಿ ಹೊಟೇಲ್‌ನಲ್ಲಿ ನಿನ್ನೆ ರಾತ್ರಿ ತಂಗಿ. ಬೆಳಿಗ್ಗೆ ಜಿಲ್ಲೆಯ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಕುರಿತ ಮುಖಂಡರ ಜೊತೆ ಸಮಾಲೋಚನೆ ನಡೆಸಿದರು.
ನಿನ್ನೆ ರಾತ್ರಿ ಮೊಳಕಾಲ್ಮುರು ಕ್ಷೇತ್ರದಲ್ಲಿ ಸಭೆ ಮುಗಿಸಿ. ಬಳ್ಳಾರಿ ಖಾಸಗಿ ಹೊಟೆಲ್ ನಲ್ಲಿ , ಸಚಿವ ಆರ್.ಅಶೋಕ್, ಪಜ್ಷದ ರಾಜ್ಯ ಅಧ್ಯಕ್ಷ ನಳೀನ್ ಕುಮಾರ್ ಕಟೇಲ್ ಅವರೊಂದಿಗೆ ವಾಸ್ತವ್ಯ ಹೂಡಿದ್ದ ಸಂದರ್ಭದಲ್ಲಿ ಟಿಕೆಟ್ ಹಂಚಿಕೆ ಕುರಿತು ಚರ್ಚೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.
ಬೆಳಿಗ್ಗೆ ಬಳ್ಳಾರಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸ್ಥಳೀಯ ನಾಯಕರೊಂದಿಗೆ ಸಮಾಲೋಚನೆ ನಡೆಸಿದರು.
ಬಳ್ಳಾರಿಯಲ್ಲಿ ಉಳಿದುಕೊಂಡು ಬಳ್ಳಾರಿ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಬಿಜೆಪಿ ಗೆಲವಿನ ತಂತ್ರ ರೂಪಿಸೋ ಬಗ್ಗೆ ಚರ್ಚೆ ನಡೆಸಿದ್ದಾರೆ.
ಬಳ್ಳಾರಿ ನಗರ ಶಾಸಕ ಸೋಮಶೇಖರ್ ರೆಡ್ಡಿ, ಪಕ್ಷದ ಜಿಲ್ಲಾ ಅಧ್ಯಕ್ಷ ಗೋನಾಳ್ ಮುರಹರಗೌಡ ಭಾಗವಹಿದ್ದರು.