ಟಿಪ್ಪರ್ ಡಿಕ್ಕಿ: ಯುವಕ ಸ್ಥಳದಲ್ಲೇ ಸಾವು

ಕೆ.ಆರ್.ಪೇಟೆ.ಮೇ.25: ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಂತೇಬಾಚಹಳ್ಳಿ ಹೋಬಳಿಯ ಮಾರೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೃತ್ತದಲ್ಲಿ ನಡೆದ ಅಪಘಾತದಲ್ಲಿ ದೊಡ್ಡಸೋಮನಹಳ್ಳಿ ಗ್ರಾಮದ ಸೋಮಶೇಖರ್ (38) ಎಂಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಟಿಪ್ಪರ್ ಚಾಲಕನ ಅಜಾಗರೂಕತೆಯಿಂದ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೊಡ್ಡಸೋಮನಹಳ್ಳಿ ಗ್ರಾಮಸ್ಥರು ಆಗಮಿಸಿ ರಸ್ತೆ ತಡೆದು ಟಿಪ್ಪರ್ ಚಾಲಕರು ಪ್ರತಿನಿತ್ಯ ಅತೀ ವೇಗವಾಗಿ ಸಂಚಾರ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳಕ್ಕೆ ಕಿಕ್ಕೇರಿ ಪೆÇಲೀಸ್ ಠಾಣೆಯ ಇನ್‍ಸ್ಪೆಕ್ಟರ್ ಸುನಿಲ್ ಹಾಗೂ ಎಸ್‍ಐ ಸಿದ್ದಲಿಂಗ ಬನಾಸೆ, ಸಿಬ್ಬಂದಿಗಳು ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ಶವಾಗಾರಕ್ಕೆ ರವಾನಿಸಿದ್ದಾರೆ.