ಟಿಪ್ಪರ್ ಲಾರಿ ಸ್ಕೂಟರ್‌ಗೆ ಡಿಕ್ಕಿ ಸವಾರ ಸಾವು

ಬೆಂಗಳೂರು,ಏ.೨೫- ವೇಗವಾಗಿ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಸ್ಕೂಟರ್ ನಲ್ಲಿ ಹೋಗುತ್ತಿದ್ದ ಸವಾರ ಸ್ಥಳದಲ್ಲೇ ಸಾವನ್ನಪ್ಪಿ ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಇಂದು ಬೆಳಿಗ್ಗೆ ನಾಯಂಡಹಳ್ಳಿ ಜಂಕ್ಷನ್‌ನಲ್ಲಿ ನಡೆದಿದೆ.
ರಾಯಚೂರು ಮೂಲದ ಮೊಹಮ್ಮದ್ (೨೦)ಮೃತಪಟ್ಟವರು, ಗಾಯಗೊಂಡಿರುವ ಉತ್ತರಪ್ರದೇಶ ಮೂಲದ ಗೋರಕ್ (೨೧) ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆತನ ಸ್ಥಿತಿ ಗಂಭೀರವಾಗಿದೆ ಎಂದು ಡಿಸಿಪಿ ಡಾ.ಸುಮನ್ ಪನ್ನೇಕರ್ ತಿಳಿಸಿದ್ದಾರೆ.
ಪೇಂಟರ್ ಕೆಲಸ ಮಾಡುತ್ತಿದ್ದ ಇವರಿಬ್ಬರೂ ಯಶವಂತಪುರದಿಂದ ಕೆಲಸಕ್ಕೆ ಬೆಳಿಗ್ಗೆ ೧೦.೪೫ ಟಿವಿಎಸ್ ಎಕ್ಸ್?ಎಲ್ ಸ್ಕೂಟರಿನಲ್ಲಿ ಕೆಲಸಕ್ಕೆ ಹೋಗುತ್ತಿದ್ದಾಗ ಮಾರ್ಗ ಮಧ್ಯದ ನಾಯಂಡಹಳ್ಳಿ ಜಂಕ್ಷನ್?ನಲ್ಲಿ ಹಿಂದಿನಿಂದ ವೇಗವಾಗಿ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
ಅಪಘಾತ ಬೆನ್ನಲ್ಲೇ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದು, ಬ್ಯಾಟರಾಯನಪುರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ ಎಂ ತಿಳಿಸಿದರು.

ಅಪಘಾತದ ಹಿನ್ನಲೆಯಲ್ಲಿ ನಾಯಂಡಹಳ್ಳಿ ಜಂಕ್ಷನ್?ನಲ್ಲಿ ಕೆಲ ಕಾಲ ರಸ್ತೆ ಸಂಚಾರ ಅಸ್ಥವ್ಯಸ್ಥಗೊಂಡಿದ್ದು ತಕ್ಷಣವೇ ಸ್ಥಳಕ್ಕೆ ಧಾವಿಸಿದ ಬ್ಯಾಟರಾಯನಪುರ ಸಂಚಾರ ಪೊಲೀಸರು ಅಪಘಾತಗೊಂಡ ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.