ಟಿಪ್ಪು ಜಯಂತಿ ಆಚರಣೆ


ಬ್ಯಾಡಗಿ, ನ 12: ಬ್ರಿಟಿಷರ ಸರ್ವಾಧಿಕಾರಿ ಆಡಳಿತದ ವಿರುದ್ಧ ಹೋರಾಡಿ, ದೇಶದಲ್ಲಿ ಸ್ವಾತಂತ್ರ್ಯದ ಕಿಚ್ಚು ಹೊತ್ತಿಸಿದ ಮಹಾನ್ ದೇಶಪ್ರೇಮಿ ಹಜರತ್ ಟಿಪ್ಪು ಸುಲ್ತಾನ್ ಅವರು ಮೈಸೂರಿನ ಹುಲಿ ಎಂದೇ ಖ್ಯಾತರಾಗಿದ್ದರು ಎಂದು ಸಮಾಜ ಸೇವಕ ಮಂಜುನಾಥ ಪೂಜಾರ ಸ್ಮರಿಸಿದರು.
ಪಟ್ಟಣದಲ್ಲಿ ಟಿಪ್ಪು ಸುಲ್ತಾನ್ ಅಭಿಮಾನಿಗಳ ಬಳಗದ ವತಿಯಿಂದ ನಡೆದ ಸ್ವಾತಂತ್ರ್ಯ ಹೋರಾಟಗಾರ ಟಿಪ್ಪು ಸುಲ್ತಾನ್ ಅವರ 271ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ತಮ್ಮ ಆಳ್ವಿಕೆಯ ಕಾಲದಲ್ಲಿ ಕೃಷಿ, ರೇಷ್ಮೆ ಸೇರಿದಂತೆ ಹಲವಾರು ಕ್ಷೇತ್ರಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದ ಟಿಪ್ಪು ಸುಲ್ತಾನ್ ಅಂದಿನ ಕಾಲಕ್ಕೆ ಆಧುನಿಕ ತಂತ್ರಜ್ಞಾನಕ್ಕೆ ಯೋಜನೆ ರೂಪಿಸಿದ್ದರು ಎಂದರು.
ಈ ಸಂದರ್ಭದಲ್ಲಿ ಮಹ್ಮದರಫೀಕ್ ಹಕೀಮ್, ಕುಮಾರ ಮುದ್ದಿ, ರಾಜೇಸಾಬ ಮೆಡ್ಲೇರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಟಿಪ್ಪು ಸುಲ್ತಾನ್ ಜಯಂತಿಯ ಪ್ರಯುಕ್ತ ಎಲ್ಲರಿಗೂ ಸಿಹಿ ಹಂಚಲಾಯಿತು.