ಟಿಪ್ಪು ಸುಲ್ತಾನ್ ಜಯಂತಿ ಆಚರಣೆ

ರಾಯಚೂರು.ನ.10-ಹಜರತ್ ಟಿಪ್ಪು ಸುಲ್ತಾನ್ ಅವರ 272 ನೇ ಜಯಂತೋತ್ಸವ ಅಂಗವಾಗಿ ಸುವರ್ಣ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾ ಘಟಕದ ವತಿಯಿಂದ ಹಜರತ್ ಟಿಪ್ಪು ಸುಲ್ತಾನ್ ಚೌಕಿ ನಲ್ಲಿರುವ ಅವರ ನಾಮಫಲಕಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಸಾಧಿಕ್ ಖಾನ್, ಹೊಸೂರು ನಾಸೀರ್, ಅರುಣ್, ಹೊಸೂರ್ ರಾಮು, ಚೋಟು, ಮಹಮ್ಮದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.