ಟಿ.ಟಿ. ಭೀಮರಾವ ಅವರಿಗೆ ಎಂಎಲ್ ಸಿ ಮಾಡಿ : ಮೋಘಾ

ಕಾಳಗಿ : ಜೂ.14:ಕಲ್ಬುರ್ಗಿ ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ಹಾಗೂ ಜಿಲ್ಲಾ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಭೀಮರಾವ ಟಿ.ಟಿ ಅವರಿಗೆ ಎಮ್ ಎಲ್ ಸಿ ಅಥವಾ ನಿಗಮ ಮಂಡಳಿ ಅಧ್ಯಕ್ಷ ಮಾಡುವಂತೆ ಕಾಳಗಿ – ಕೊಡ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ದಿನೇಶ ಮೋಘಾ ಮನವಿ ಮಾಡಿಕೊಂಡರು.

ಸುದ್ದಿಗಾರರೊಂದಿಗೆ ಮಾತನಾಡಿದವರು ಕಳೆದ 40 ವರ್ಷಗಳಿಂದ ಚಿಂಚೋಳಿ ಕ್ಷೇತ್ರ ಅಭಿವೃದ್ಧಿಗಾಗಿ ಹಗಲಿರಳೆನ್ನದೇ ಹೋರಾಟಗಳನ್ನು ಮಾಡಿ ಸಮಾಜ ಸೇವೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಮುಖಂಡರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ ಅವರ ಸೇವೆಯನ್ನು ಗುರುತಿಸಿ ಹೈಕಮಾಂಡ್ ಅವರಿಗೆ ಸೂಕ್ತ ಸ್ಥಾನಮಾನ ನೀಡುವಂತೆ ಮನವಿ ಮಾಡಿದರು.

ಟಿ.ಟಿ ಭೀಮರಾವ ಅವರು ಪಕ್ಷದ ವಿವಿಧ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಕೆಲಸ ಮಾಡಿ ಗೆಲುವಿಗೆ ರೂವಾರಿಗಳಾಗಿದ್ದಾರೆ. ಚಿಂಚೋಳಿ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ಕಾರ್ಯಕರ್ತರನ್ನು ಮುನ್ನಡೆಸುವ ಜವಾಬ್ದಾರಿ ಟಿ. ಟಿ ಅವರ ಹೆಗಲ ಮೇಲಿದೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಿಂಚೋಳಿ ಕ್ಷೇತ್ರದಿಂದ ಅತ್ಯಧಿಕ ಮತ ಕಾಂಗ್ರೆಸ್ ಅಭ್ಯರ್ಥಿಗೆ ಲಭಿಸಲು ಇವರಿಗೆ ಸೂಕ್ತ ಸ್ಥಾನಮಾನ ನೀಡುವಂತೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಪಂಚಾಯತ ರಾಜ್ ಐಟಿಬಿಟಿ ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕಾ ಖರ್ಗೆ ಅವರಿಗೆ ಮನವಿ ಮಾಡಿದರು.