ಟಿ.ನರಸೀಪುರ ತಾಲ್ಲೂಕಿನ ಕುರುಬೂರು ಬಳಿ ಅಪಘಾತ: ಚೆಲುವಾಂಭ ಆಸ್ಪತ್ರೆಗೆ ಸಚಿವರ ಭೇಟಿ

ಟಿ ನರಸೀಪುರ ತಾಲ್ಲೂಕಿನ ಕುರುಬೂರು ಬಳಿ ಭೀಕರ ರಸ್ತೆ ಸಂಬಂಧ ಇಂದು ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ ಹೆಚ್.ಸಿ.ಮಹಾದೇವಪ್ಪ ಅವರು ಇಂದು ಚೆಲುವಾಂಭ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳನ್ನು ಭೇಟಿ ಮಾಡಿ ಯೋಗ ಕ್ಷೇಮ ವಿಚಾರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ಈ‌ ಘಟನೆ ದುರದೃಷ್ಟಕರವಾದದ್ದು ಹತ್ತು ಮಂದಿ ಮೃತಪಟ್ಟಿರುವುದು ಮನಸ್ಸಿಗೆ ನೋವಾಗಿದೆ.

ಈಗಾಗಲೇ ಸರ್ಕಾರ ಮೃತರಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ ಮಾಡಿದೆ. ಗಾಯಾಳುಗಳಿಗೆ 50 ಸಾವಿರ ಪರಿಹಾರ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ ಸಚಿವರು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಕ್ರಮಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಹಾಗೂ ಅಧಿಕಾರಿಗಳು ಉಪಸ್ಧಿತರಿದ್ದರು.