ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ಪ್ರವಾಸ ನಾಳೆ ನಿರ್ಧಾರ

ಕೊಲ್ಕತ್ತ, ಡಿ.3-ಭಾರತೀಯ ಕ್ರಿಕೆಟ್ ಮಂಡಳಿಯ ನಾಳೆ 90ನೇ ವಾರ್ಷಿಕ ಸಾಮಾನ್ಯ ಸಭೆ ನಾಳೆ ನಡೆಯಲಿದೆ. ಈ ವೇಳೆ ಟೀಂ ಇಂಡಿಯಾದ ದಕ್ಷಿಣ ಆಫ್ರಿಕಾ ಪ್ರವಾಸ ಸೇರಿದಂತೆ ಅನೇಕ ವಿಷಯಗಳ ಕುರಿತು ಮಹತ್ವದ ಚರ್ಚೆ ನಡೆಯಲಿದೆ.
ಟೀಂ ಇಂಡಿಯಾ ಡಿಸೆಂಬರ್​​​ 9ರಂದು ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಬೇಕಾಗಿದೆ. ಆದರೆ, ಹರಿಣಗಳ ನಾಡಿನಲ್ಲಿ ರೂಪಾಂತರ ಒಮಿಕ್ರಾನ್​​ ಹೆಚ್ಚಾಗಿ ಕಂಡು ಬಂದಿರುವ ಕಾರಣ, ಬಿಸಿಸಿಐ ನಾಳೆ ಮಹತ್ವದ ನಿರ್ಧಾರ ಕೈಗೊಳ್ಳಲಿದೆ.
ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡಿರುವ ಕೋವಿಡ್​​ನ ಹೊಸ ರೂಪಾಂತರ ಒಮಿಕ್ರಾನ್​ ಎಲ್ಲ ದೇಶಗಳಲ್ಲೂ ಈಗಾಗಲೇ ಆತಂಕ ಮೂಡಿಸಿದೆ. ಈ ಹಿಂದಿನ ಸೋಂಕಿಗಿಂತಲೂ ಒಮಿಕ್ರಾನ್​ ವೇಗವಾಗಿ ಹರಡುವ ಸಾಧ್ಯತೆ ಇದೆ ಎಂಬ ಕಾರಣಕ್ಕಾಗಿ ಭಾರತ ಸೇರಿದಂತೆ ಅನೇಕ ದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಇದರ ಬೆನ್ನಲ್ಲೇ ಟೀಂ ಇಂಡಿಯಾದ ದಕ್ಷಿಣ ಆಫ್ರಿಕಾ ಪ್ರವಾಸದ ಮೇಲೆ ಕಾರ್ಮೋಡ ಮೂಡಿದೆ.
ಪ್ರವಾಸ ಕುರಿತಂತೆ ತರಬೇತುದಾರ ರಾಹುಲ್ ದ್ರಾವಿಡ್ ಅವರು ಬಿಸಿಸಿಐ ಜತೆ ಮಾತುಕತೆ ನಡೆಸಿದ್ದು ಶೀಘ್ರ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ನಾಯಕ ವಿರಾಟ್ ಕೊಹ್ಕಿ ನಿನ್ನೆ ತಿಳಿಸಿದ್ದರು.
ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಟೀಂ ಇಂಡಿಯಾ ಮೂರು ಟೆಸ್ಟ್​​ ಪಂದ್ಯ, ಮೂರು ಏಕದಿನ ಹಾಗೂ ನಾಲ್ಕು ಟಿ-20 ಪಂದ್ಯಗಳನ್ನು ಆಡಲಿದೆ.