ಟೀಂ ಇಂಡಿಯಾ ವಿರುದ್ಧ ಟೆಸ್ಟ್ ಆಸೀಸ್ ತಂಡ ಪ್ರಕಟ

v


ನವದೆಹಲಿ, ನ ೧೨- ಮುಂಬರುವ ತಿಂಗಳು ಟೀಂ ಇಂಡಿಯಾ ವಿರುದ್ಧ ನಡೆಯಲಿರುವ ಟೆಸ್ಟ್ ಸರಣೆಗೆ ಆಸ್ಟ್ರೇಲಿಯಾ ತಂಡವನ್ನು ಕ್ರಿಕೆಟ್ ಆಸ್ಟ್ರೇಲಿಯಾ ಪ್ರಕಟಿಸಿದೆ.
ಆಸೀಸ್ ತಂಡದಲ್ಲಿ ಈ ಬಾರಿ ಐವರು ಹೊಸಬರಿಗೆ ಅವಕಾಶವನ್ನು ನೀಡಲಾಗಿದೆ. ಆಸ್ಟ್ರೇಲಿಯಾ ಪ್ರಥಮದರ್ಜೆ ಕ್ರಿಕೆಟ್‌ನಲ್ಲಿ ಮಿಂಚುತ್ತಿರುವ ಆರಂಭಿಕ ಆಟಗಾರ ವಿಲ್ ಪುಕೋವ್ಸ್ಕಿ ಕೂಡ ಈ ತಂಡದಲ್ಲಿ ಸ್ಥಾನವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಡಿಸೆಂಬರ್ ೧೭ ರಿಂದ ಟೆಸ್ಟ್ ಸರಣಿ ಆರಂಭವಾಗಲಿದೆ.
ಆಸ್ಟ್ರೇಲಿಯಾ ತಂಡವನ್ನು ಟಿಮ್ ಪೈನ್ ಮುನ್ನಡೆಸಲಿದ್ದಾರೆ. ನಾಲ್ಕು ಟೆಸ್ಟ್ ಪಂದ್ಯಗಳ ಈ ಸರಣಿಯಲ್ಲಿ ಮೊದಲ ಪಂದ್ಯದಲ್ಲಿ ಮುನ್ನಡೆಸಿದ ಬಳಿಕ ಟೀಮ್ ಒಂಡಿಯಾ ನಾಯಕ ವಿರಾಟ್ ಕೊಹ್ಲಿ ರಜೆಯ ಹಿನ್ನೆಲೆಯಲ್ಲಿ ತವರಿಗೆ ಮರಳಲಿದ್ದಾರೆ. ರಹಾನೆ ಮುಂದಿನ ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ.ಆಸ್ಟ್ರೇಲಿಯಾ ಟೆಸ್ಟ್ ತಂಡದ ಉಪನಾಯಕನನ್ನಾಗಿ ಪ್ಯಾಟ್ ಕಮ್ಮಿನ್ಸ್ ಅವರನ್ನು ಹೆಸರಿಸಲಾಗಿದೆ. ಆಸ್ಟ್ರೇಲಿಯಾದ ವೇಗದ ಬೌಲಿಂಗ್ ಪಡೆಯನ್ನು ಇವರೇ ಮುನ್ನಡೆಸಲಿದ್ದಾರೆ.
ಆಸ್ಟ್ರೇಲಿಯಾ ಟೆಸ್ಟ್ ತಂಡ: ಟಿಮ್ ಪೈನ್ (ನಾಯಕ), ಜೇಮ್ಸ್ ಪ್ಯಾಟಿನ್ಸನ್, ವಿಲ್ ಪುಕೊವ್ಸ್ಕಿ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಸೀನ್ ಅಬಾಟ್, ಜೋ ಬರ್ನ್ಸ್, ಪ್ಯಾಟ್ ಕಮ್ಮಿನ್ಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಮಾರ್ನಸ್ ಲ್ಯಾಬುಶೈನ್, ನಥನ್ ಲಿಯಾನ್ , ಮೈಕೆಲ್ ನೇಸರ್.