ಟೋಯಿಂಗ್ ಮರುಜಾರಿ ಪ್ರಸ್ತಾಪವಿಲ್ಲ: ಆರಗ

ಬೆಂಗಳೂರು, ಸೆ.೧೭-ಬೆಂಗಳೂರು ನಗರದಲ್ಲಿ ಸ್ಥಗಿತ ಗೊಳಿಸಲಾಗಿರವ ಟೋಯಿಂಗ್ ವ್ಯವಸ್ಥೆಯನ್ನು ಪುನಃ ಜಾರಿ ಗೊಳಿಸುವ ಯಾವುದೇ ಪ್ರಸ್ತಾವನೆ, ಸದ್ಯಕ್ಕೆ, ಸರಕಾರದ ಮುಂದಿಲ್ಲ ವೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಸಚಿವರು, ನಗರದಲ್ಲಿ ಸಾರ್ವಜನಿಕ ಸ್ನೇಹಿ ಮತ್ತು ಸುಗಮ ವಾಹನ ಪಾರ್ಕಿಂಗ್ ವ್ಯವಸ್ಥೆ, ಜಾರಿಗೊಳಿಸುವ ಬಗ್ಗೆ, ವಿಸ್ತೃತವಾದ ಚರ್ಚೆ ಹಾಗೂ ತಜ್ಞರ ಸಲಹೆ ಪಡೆದು, ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೂ ಈ ಬಗ್ಗೆ ಚರ್ಚೆ ನಡೆಸಿದ್ದು, ಟೋಯಿಂಗ್ ಬಗ್ಗೆ ಯಾವುದೇ ಅಂತಿಮ ತೀರ್ಮಾನ ವಾಗಿಲ್ಲ, ಎಂದು ಸ್ಪಷ್ಟಪಡಿಸಿದ್ದಾರೆ.ಸಾರ್ವಜನಿಕರಿಂದ, ಟೋಯಿಂಗ್ ವ್ಯವಸ್ಥೆ ಬಗ್ಗೆ ಇದ್ದ ಜನಾಕ್ರೋಶ ಹಾಗೂ ಕಿರುಕುಳಗಳ ಬಗ್ಗೆ ಬಂದ ದೂರುಗಳ ಹಿನ್ನೆಲೆಯಲ್ಲಿ, ಸ್ಥಗಿತಗೊಳಿ ಸಲಾಗಿತ್ತು ಎಂದು ನೆನಪಿಸಿದ ಸಚಿವರು, ಹಳೆಯ ವ್ಯವಸ್ಥೆಯನ್ನು ಪುನಃ ಜಾರಿಗೊಳಿಸಲಾಗುವುದಿಲ್ಲ ಎಂದು ತಿಳಿಸಿದ್ದಾರೆ.