ಟ್ಯಾಂಕರ್ ಡಿಕ್ಕಿ ಕಾರಿನಲ್ಲಿದ್ದ ಬೆಂಗಳೂರಿನ ಮೂವರು ಸಾವು

ಬೆಂಗಳೂರು,ನ.11- ಹಾಲಿನ ಟ್ಯಾಂಕರ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ಬಳಿಯ ಬೆಂಗಳೂರು-ಪೂತಲಪಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬೆಂಗಳೂರಿನ ಬಸವಣ್ಣನಗರದ ಅಶೋಕ್ ಬಾಬು(31), 28 ವರ್ಷದ ಪತ್ನಿ, 2 ವರ್ಷದ ಮಗು ಸಾವನ್ನಪ್ಪಿದೆ. ಮೂವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಚಿತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.