ಟ್ಯಾಬ್ಲೋ ವಾಹನಗಳಿಗೆ ಚಾಲನೆ

ದಾವಣಗೆರೆ.ಜೂ.೮; ನಗರದ ಜಿಲ್ಲಾಧಿಕಾರಿಗಳ‌ ಕಛೇರಿ ಮುಂಭಾಗ ಟ್ಯಾಬ್ಲೋ ವಾಹನಗಳಿಗೆ ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಭೈರತಿ ಬಸವರಾಜ್ ಹಾಗೂ ಸಂಸದರಾದ ಡಾ. ಜಿ.ಎಂ.ಸಿದ್ದೇಶ್ವರ ರವರು  ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಕೆ.ಎಸ್.ಡಿ.ಎಲ್. ಅಭಿವೃದ್ಧಿ ನಿಗಮದ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ  ಎಸ್.ವಿ.ರಾಮಚಂದ್ರಪ್ಪ, ಡಾ.ಬಾಬು ಜಗಜೀವನ್ ರಾಮ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಪ್ರೊ.ಲಿಂಗಣ್ಣ, ಶಾಸಕರಾದ ಎಸ್.ಎ.ರವೀಂದ್ರನಾಥ್, ಮೇಯರ್ ಎಸ್.ಟಿ.ವೀರೇಶ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ಪಂಚಾಯತ್ ಸಿ.ಇ.ಓ ವಿಜಯ್ ಮಹಾಂತೇಶ್, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳಾದ ಹನುಮಂತರಾಯಪ್ಪ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.