
ಗುರುಮಠಕಲ್:ಎ.29: ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಾದ ಎಸ್. ಎಸ್. ಕದ್ರೋಳ್ಳಿ ರವರು, ಗುರುಮಠಕಲ್ ತಾಲೂಕಿನ ಚಿನ್ನಾಕರ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಬೆಟ್ಟದಳ್ಳಿ ಗ್ರಾಮದಲ್ಲಿ ಮನರೇಗಾ ಯೋಜನೆಯ ಜಲಶಕ್ತಿ ಅಭಿಯಾನ ದ ಟ್ರಾಚೆಂಸ್ ಕಾಮಗಾರಿಯಡಿ ಪ್ರಗತಿಯಲ್ಲಿದ್ದ ಟ್ರಾಚೆಂಸ್ ಕಾಮಗಾರಿ ವೀಕ್ಷಣೆ ಮಾಡಿದರು.
ಈ ವೇಳೆ ಕಾಮಗಾರಿ ಸ್ಥಳದಲ್ಲಿ ನರೇಗಾ ಕೂಲಿಕಾರರಿಗೆ
ನರೇಗಾ ಯೋಜನೆಯಡಿ ಇರುವ ಸೌಲಭ್ಯಗಳ ಕುರಿತು ಮಾಹಿತಿ ನೀಡಲು ನರೇಗಾ ಕೂಲಿ ಕಾರ್ಮಿಕರಿಗೆ ಆರೋಗ್ಯ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಮತದಾರರಿಗೆ ಮತದಾನದ ಕುರಿತು ಜಾಗೃತಿ ಮೂಡಿಸಲು ಹಮ್ಮಿಕೊಂಡ ಜನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಈ ವೇಳೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ. ಅರೋಗ್ಯ ಸಿಬ್ಬಂದಿಯವರು ,ಕಾಯಕ ಬಂದುಗಳು, 48 ಜನ ನರೇಗಾ ಕೂಲಿ ಕಾರ್ಮಿಕರು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಇದ್ದರು.