ಟ್ರ್ಯಾಕ್ಟರ್‌ಗೆ ಸಿಲುಕಿ ಬಾಲಕ ಸಾವು

ಮೈಸೂರು.ಮೇ.೧೮- ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್‌ನಿಂದ ಆಕಸ್ಮಿಕವಾಗಿ ಬಾಲಕ ಕೆಳಗೆ ಬಿದ್ದು ಸಾವನಪ್ಪಿದ ಘಟನೆ ನಂಗನಗೂಡಿನ ದೇವರಸನಹಳ್ಳಿಯಲ್ಲಿ ನಡೆದಿದೆ.ಬಾಲಕ ಭವಿಷ್ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಬಾಲಕ ಭವಿಷ್ ರಜೆ ಹಿನ್ನೆಲೆಯಲ್ಲಿ ಅಜ್ಜಿ ಮನೆಗೆ ಬಂದಿದ್ದ. ಈ ವೇಳೆ ಭವಿಷ್ ತನ್ನ ಸೋದರಮಾವನ ಜೊತೆ ಟ್ರ್ಯಾಕ್ಟರ್‌ನಲ್ಲಿ ಜಮೀನಿಗೆ ತೆರಳಿದ್ದ. ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ವೇಳೆ ಭವಿಷ್ ಆಕಸ್ಮಿಕವಾಗಿ ಟ್ರ್ಯಾಕ್ಟರ್‌ನಿಂದ ಕೆಳಗೆ ಬಿದ್ದಿದ್ದಾನೆ. ಬಳಿಕ ಚಕ್ರಕ್ಕೆ ಸಿಲುಕಿ ಅವಘಡ ಸಂಭವಿಸಿದೆ.ಚಕ್ರಕ್ಕೆ ಸಿಲುಕಿ ಬಾಲಕನ ದೇಹ ಛಿದ್ರ ಛಿದ್ರವಾಗಿದೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.