ಟ್ರ್ಯಾಕ್ಟರ್ ರ್‍ಯಾಲಿ ತಾತ್ಕಾಲಿಕವಾಗಿ ಮುಂದೂಡಲು ರೈತ ಸಂಘಟನೆಗಳ ನಿರ್ಧಾರ

ನವದೆಹಲಿ, ನ.27- ಕಳೆದ ಒಂದು ವರ್ಷದಿಂದ ರೈತರು ನಡೆಸುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ಇದೇ 29ರಂದು ನಡೆಸಲು ಉದ್ದೇಶಿಸಿದ್ದ ಟ್ರ್ಯಾಕ್ಡರ್ ರ್‍ಯಾಲಿಯನ್ನು ರೈತ ಸಂಘಟನೆಗಳು ಮುಂದೂಡಿವೆ.

ಕಿಸಾನ್ ಸಂಯುಕ್ತ ಮೋರ್ಚಾ ಸಂಘಟನೆ ತಾತ್ಕಾಲಿಕವಾಗಿ ಮುಂದೂಡಲಾಗಿದೆ ಆದರೆ ಯಾವುದೇ ಕಾರಣಕ್ಕೂ ಸದ್ಯ ನಡೆಯುತ್ತಿರುವ ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯುವ ಉದ್ದೇಶವಿಲ್ಲ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ತಿಳಿಸಿದ್ದಾರೆ.

ರೈತರಿಗೆ ಕನಿಷ್ಠ ಬೆಂಬಲ ಬೆಲೆ ನೀಡುವ ಸಂಬಂಧ ಕೇಂದ್ರ ಸರ್ಕಾರ ಭರವಸೆ ನೀಡುವ ತನಕ ಮತ್ತು ರೈತರೊಂದಿಗೆ ಮಾತುಕತೆ ನಡೆಸುವರೆಗೆ ಯಾವುದೇ ಕಾರಣಕ್ಕೂ ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ರೈತರ ಹೋರಾಟದಲ್ಲಿ ರೈತರಿಗೆ ಪರಿಹಾರ ನೀಡುವುದು ಮತ್ತು ಉತ್ತರಪ್ರದೇಶದ ಲಖೀಂ ಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ತನಕ ಹೋರಾಟ ಹಿಂದಕ್ಕೆ ಪಡೆಯುವುದಿಲ್ಲ ಎಂದು ಅವರು ಹೇಳಿದ್ದಾರೆ.

ಕೃಷಿ ಕಾಯ್ದೆಯನ್ನು ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿ 29ರಂದು ಸಂಸತ್ ಭವನದ ಮುಂದೆ ಧರಣಿ ಮಂಡಲ ಸಂಘಟನೆ ನಾಯಕರು ನಿರ್ಧರಿಸಿದ್ದರು

ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ವಾರವೇ ಕೃಷಿ ಕಾಯ್ದೆಯನ್ನು ಹಿಂದಕ್ಕೆ ಪಡೆಯುವುದಾಗಿ ಪ್ರಕಟಿಸಿದ್ದರು. ಇದರ ಜೊತೆಗೆ ಸೋಮವಾರದಿಂದ ಆರಂಭವಾಗಲಿರುವ ಸಂಸತ್ ಅಧಿವೇಶನದಲ್ಲಿ ಅಧಿಕೃತವಾಗಿದೆ ನಮ್ಮ ಜೊತೆ ವಾಪಸ್ ಪಡೆಯುವ ಪ್ರಕ್ರಿಯೆಗಳು ಆರಂಭವಾಗಲಿವೆ.