ಡಬಲ್‍ಇಂಜಿನ್ ಸರ್ಕಾರದಿಂದ ಮನೆಬಾಗಿಲಿಗೆ ಸೇವೆ:ಸಚಿವ ಶಂಕರ ಪಾಟೀಲ

ಬೀದರ,ಮಾ.16: ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳು ಜನರ ಮನೆ ಬಾಗಿಲಿಗೆ ತಲುಪಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಶಂಕರ ಬ.ಪಾಟೀಲ ಮುನೇನಕೊಪ್ಪ ಹೇಳಿದರು.ಜಿಲ್ಲಾಡಳಿತ, ಜಿಪಂ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ನೇರವಾಗಿ ಫಲಾನುಭವಿಗಳ ಅಕೌಂಟಗೆ ಹಣ ಜಮೆ ಮಾಡುವ ಕೆಲಸವನ್ನು ನರೇಂದ್ರ ಮೋದಿ ಅವರು ಮಾಡುತ್ತಿದ್ದಾರೆಎಂದು ಹೇಳಿದರು.ಕೇಂದ್ರ ನೂತನ ನವೀಕರಿಸಬಹುದಾದ ಇಂಧನ ಮೂಲ ಹಾಗೂ ರಸಾಯನಿಕ ಮತ್ತು ರಸಗೊಬ್ಬರ ರಾಜ್ಯ ಖಾತೆ ಸಹ ಸಚಿವರಾದ ಭಗವಂತ ಖೂಬಾ ಅವರು ಮಾತನಾಡಿ,ಪ್ರತಿಯೊಂದು ಬಡ ಹೆಣ್ಣು ಮಕ್ಕಳಿಗೆ ಉಚಿತ ಗ್ಯಾಸ್ ಸಿಲಿಂಡರ ಕೊಟ್ಟಿದೆ ಮತ್ತು 13 ಕೋಟಿ ಶೌಚಾಲಯಗಳನ್ನು ಬಡ ಹೆಣ್ಣು ಮಕ್ಕಳ ಮನೆಯಲ್ಲಿ ಕಟ್ಟಿಸಲಾಗಿದೆ. 3.5 ಕೋಟಿ ವಸತಿಗಳನ್ನು ನಮ್ಮ ಸರ್ಕಾರ ನೀಡಿದೆ, 18 ಕೋಟಿ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ, ಆಯುಷ್ಮಾನ ಭಾರತ ಆರೋಗ್ಯ ಕಾರ್ಡದಿಂದ 5 ಲಕ್ಷ ರೂ.ವರೆಗೆ ಆಸ್ಪತ್ರೆಯಲ್ಲಿ ಬಡವರಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ, ಗರ್ಭಿಣಿ ಮಹಿಳೆಯರಿಗೆ 5 ಸಾವಿರ ರೂ. ನೀಡಲಾಗುತ್ತಿದೆ. ಪ್ರಧಾನಮಂತ್ರಿ ಜನ ಧನ್ ಯೋಜನೆಯ ಮುಖಾಂತರ ದೇಶದ 70 ಕೋಟಿ ಬಡ ಹೆಣ್ಣು ಮಕ್ಕಳ ತಮ್ಮ ಖಾತೆಯನ್ನು ಉಚಿತವಾಗಿ ಬ್ಯಾಂಕಿನಲ್ಲಿ ತೆರೆಯುವಂತೆ ಮಾಡಲಾಗಿದೆ. ಕೃಷಿ ಸಮ್ಮಾನ್ ಯೋಜನೆಯಿಂದ 11.5 ಕೋಟಿ ರೈತರು ಲಾಭ ಪಡೆದಿದ್ದಾರೆ. ಯೂರಿಯಾ ಡಿ.ಎ.ಪಿ.ಗೊಬ್ಬರದ ಮೇಲು ಭಾರತ ಸರ್ಕಾರ ಸಬ್ಸಿಡಿಯನ್ನು ನೀಡುತ್ತಿದೆ ಎಂದು ಹೇಳಿದರು.
ಪಶು ಸಂಗೋಪನೆ ಸಚಿವರಾದ ಪ್ರಭು ಬಿ.ಚವ್ಹಾಣ್ ಮಾತನಾಡಿ ಮುಖ್ಯಮಂತ್ರಿಗಳು ನಮ್ಮ ಭಾಗದ ಅಭಿವೃದ್ಧಿಗೆ 5 ಸಾವಿರ ಕೋಟಿ ಹಣವನ್ನು ನೀಡಿದ್ದಾರೆ. ಮಕ್ಕಳಿಗೆ ಲಾಭವಾಗಬೇಕೆನ್ನುವ ಉದ್ದೇಶದಿಂದ ಸರ್ಕಾರ ಪರಿಶಿಷ್ಟ ಜಾತಿಯ 15 ಪ್ರತಿಶತ ಇರುವ ಮೀಸಲಾತಿಯನ್ನು 17 ಪ್ರತಿಶತಕ್ಕೆ ಹೆಚ್ಚಿಸಲಾಗಿದೆ ಮತ್ತು ಪರಿಶಿಷ್ಟ ಪಂಗಡದ ಶೇ. 3 ಪ್ರತಿಶತ ಇರುವ ಮೀಸಲಾತಿಯನ್ನು ಶೇ.7 ಪ್ರತಿಶತಕ್ಕೆ ಹೆಚ್ಚಿಸಿದೆ ಎಂದರು.
ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಸಚಿವ ಆಚಾರ್ ಹಾಲಪ್ಪ ಬಸಪ್ಪಮತ್ತು ಬೀದರ ದಕ್ಷಿಣ ಶಾಸಕ ಬಂಡೆಪ್ಪ ಖಾಶೆಂಪೂರ ಮಾತನಾಡಿದರು.ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಯಿಂದ ಸರ್ಕಾರದ ಯೋಜನೆಗಳ ಲಾಭ ಪಡೆದ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಲಾಯಿತು. ಸಮ್ಮೇಳದನದಲ್ಲಿ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಬಸವಕಲ್ಯಾಣ ಶಾಸಕ ಶರಣು ಸಲಗರ, ವಿಧಾನ ಪರಿಷತ್ ಸದಸ್ಯ ರಘುನಾಥರಾವ ಮಲ್ಕಾಪೂರೆ, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ, ಯದಲಾಪೂರ ಗ್ರಾಮ ಪಂಚಾಯತ ಅಧ್ಯಕ್ಷ ಸಪ್ನಾ ಸಂಜು ಕುಮಾರ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾಂ ಎಂ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್. ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ ಸರ್ಕಾರದ ಲಾಭ ಪಡೆದ ಫಲಾನುಭವಿಗಳು ಸೇರಿದಂತೆ ಹಲವಾರು ಜನರು ಉಪಸ್ಥಿತರಿದ್ದರು.