ಡಬಲ್ ಇಂಜಿನ್ ಸರ್ಕಾರದ ಅಭಿವೃದ್ಧಿ ಕೆಲಸಗಳೇ ನಮಗೆ ಶ್ರೀರಕ್ಷೇ,

ದಾವಣಗೆರೆ.ಏ.೨೫; ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಜಿ ಅಜಯ್ ಕುಮಾರ್ ದಕ್ಷಿಣ ಕ್ಷೇತ್ರದಾದ್ಯಂತ ಬಿರುಸಿನ ಪ್ರಚಾರ ಕೈಗೊಂಡಿದ್ದರು. ಈ ವೇಳೆ ಮಾತನಾಡಿದ ಅವರು ಡಬಲ್ ಇಂಜಿನ್ ಸರ್ಕಾರದ ಅಭಿವೃದ್ಧಿ ಕೆಲಸಗಳೇ ನಮಗೆ ಶ್ರೀರಕ್ಷೇ ಜನತೆ ಇನ್ನೂ ಹೆಚ್ಚಿನ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಬೇಕು ಎಂದರು. ನಂತರಶಿರಮಗೊಂಡನಹಳ್ಳಿ, ನಾಗನೂರು, ಹೊಸ ಬಿಸಲೇರಿ, ಹಳೇ ಬಿಸಲೇರಿ ಗ್ರಾಮಗಳಲ್ಲಿ ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಯಶವಂತರಾವ್ ಜಾಧವ್ ಅವರ ನೇತೃತ್ವದಲ್ಲಿ ಸ್ಥಳೀಯ ಮುಖಂಡರು, ಕಾರ್ಯಕರ್ತರೊಂದಿಗೆ ಮನೆ ಮನೆ ಭೇಟಿ ಮಾಡುವ ಮೂಲಕ ಮತಯಾಚನೆ ಮಾಡಲಾಯಿತು.