ಡಾಲಿ-ಸತ್ಯದೇವ್  ಜೋಡಿಯ ‘ಝೀಬ್ರಾ’ ಚಿತ್ರೀಕರಣ ಪೂರ್ಣ

ಡಾಲಿ ಧನಂಜಯ್ ಹಾಗೂ ಸತ್ಯದೇವ್ ಕಾಂಬಿನೇಷನ್‍ನ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಝೀಬ್ರಾ ಚಿತ್ರೀಕರಣ ಪೂರ್ಣಗೊಂಡಿದ್ದು ಪೆÇೀಸ್ಟ್  ಪೆÇ್ರಡಕ್ಷನ್ ಕೆಲಸಗಳು ಆರಂಭವಾಗಿವೆ.

“ಝೀಬ್ರಾ” ಮಾಸ್ ಎಂಟರ್‍ಟೇನರ್ ಚಿತ್ರವಾಗಿದ್ದು,  ಡಾಲಿ ಜೊತೆ ಸತ್ಯದೇವ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರದಲ್ಲಿ ನೆಗೆಟಿವ್ ಶೇಡ್‍ನಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಸತ್ಯದೇವ್ ಮತ್ತು ಡಾಲಿ ಇಬ್ಬರೂ ಚಿತ್ರದ ನಾಯಕರಾಗಿದ್ದು, ಇಬ್ಬರ ಕಾಂಬಿನೇಷನ್ ಸಿನಿಮಾ ನೋಡಲು ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಇಬ್ಬರದ್ದೂ 26ನೇ ಸಿನಿಮಾ ಎಂಬುದು ವಿಶೇಷ.

ಝೀಬ್ರಾ ಸಿನಿಮಾ ತೆಲುಗು ಮತ್ತು ಕನ್ನಡದಲ್ಲಿ ಮೂಡಿ ಬರಲಿದೆ. ಪ್ಯಾನ್ ಇಂಡಿಯಾ ಲೆವೆಲ್‍ನಲ್ಲಿ ಸಿನಿಮಾ ತೆರೆ ಕಾಣಲಿದೆ. ಈ ಸಿನಿಮಾದಲ್ಲಿ ಪ್ರಿಯಾ ಭವಾನಿ ಶಂಕರ್, ಸತ್ಯರಾಜ್, ಸುನೀಲ್ ವರ್ಮ, ಜೆನಿಫರ್ , ಸುರೇಶ್‍ಚಂದ್ರ ಮೆನನ್, ಕಲ್ಯಾಣಿ ನಟರಾಜ್ ಸೇರಿದಂತೆ ಹಲವು ಕಲಾವಿದರು ನಟಿಸುತ್ತಿದ್ದಾರೆ. ಈಶ್ವರ್ ಕಾರ್ತಿಕ್ ನಿರ್ದೇಶನ ಮಾಡಿದ್ದು, ಕತೆ-ಚಿತ್ರಕತೆ ಅವರದ್ದೇ. ಪ್ಯಾನ್ ಇಂಡಿಯಾ ‘ಝೀಬ್ರಾ’ ಚಿತ್ರಕ್ಕೆ ಕೆಜಿಎಫ್ ಚಿತ್ರ ಖ್ಯಾತಿಯ ರವಿ ಬಸ್ರೂರು ಸಂಗೀತ ನೀಡಿದ್ದು ಸದ್ಯದಲ್ಲಿಯೇ ಚಿತ್ರ ತೆರೆಗೆ ಬರಲಿದೆ.