ಡಾ. ಅಂಬೇಡ್ಕರ್ ಜಯಂತಿ ಆಚರಣೆ

ಹುಬ್ಬಳ್ಳಿ,ಏ14 : ಗೋಕುಲ ರಸ್ತೆಯಲ್ಲಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ 132 ನೇ ಜಯಂತಿ ಆಚರಿಸಲಾಯಿತು. ವ್ಯವಸ್ಥಾಪಕ ನಿರ್ದೇಶಕ ಭರತ್. ಎಸ್ ರವರು ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಉಪ ಮುಖ್ಯ ಸಂಚಾರ ವ್ಯವಸ್ಥಾಪಕ ಹಾಗೂ ಸಾರ್ವಜನಿಕ ಸಂಪರ್ಕಾಧಿಕಾರಿ ಎಚ್. ರಾಮನಗೌಡರ ಮಾತನಾಡಿ, ಇಂದಿನ ಸಮಾಜದಲ್ಲಿ ಡಾ. ಬಿ.ಆರ್.ಅಂಬೇಡ್ಕರ ತತ್ವ ಸಿದ್ಧಾಂತಗಳನ್ನು ಅನುಸರಿಸುವ ಅಗತ್ಯವಿದೆ. ಮಾನವತಾವಾದಿ ಡಾ.ಬಿ.ಆರ್.ಅಂಬೇಡ್ಕರ್ ರವರು ಅತ್ಯಂತ ಕಡುಬಡತನದಿಂದ ಬಂದರೂ ಸಹ ಛಲದಿಂದ ಹೋರಾಡಿ, ಉನ್ನತ ಶಿಕ್ಷಣ ಪಡೆದು ದೆಶಕ್ಕೆ ಅತ್ಯಂತ ಶ್ರೇಷ್ಠ ಸಂವಿಧಾನವನ್ನು ನೀಡಿದ್ದಾರೆ. ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮುಖಾಂತರ ಗೆಲುವು ಸಂಪಾದಿಸಬೇಕೆಂದು ಕರೆ ಕೊಟ್ಟಿದ್ದಾರೆ. ಇಂದಿನ ಯುವ ಪಿಳಿಗೆ ಅವರ ಆದರ್ಶಗಳನ್ನು ರೂಢಿಸಿಕೊಳ್ಳುವ ಅವಶ್ಯಕತೆ ಇದೆ ಎಂದು ಹೇಳಿದರು.

ವಿರೂಪಾಕ್ಷ ಕಟ್ಟೀಮನಿ ಪ್ರಸ್ತಾವಿಕ ಮಾತನಾಡಿ, ನಿರೂಪಿಸಿ ವಂದನಾರ್ಪಣೆ ಮಾಡಿದರು.

ಅಧಿಕಾರಿಗಳಾದ ರಾಜೇಶ ಹುದ್ದಾರ, ಶಶಿಧರ ಕುಂಬಾರ, ಎಂ.ಆರ್. ಮುಂಜಿ, ಐ.ಎ.ಕಂದಗಲ್, ದಿವಾಕರ, ಮಾಲತಿ, ದಶರಥ ಕೆಳಗೇರಿ, ವಿವಿಧ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಿಬ್ಬಂದಿ ಮತ್ತಿತರರು ಇದ್ದರು.