ಡಾ. ಅಂಬೇಡ್ಕರ್ ಪುತ್ಥಳಿಗೆ ಅಪಮಾನ ; ಅಶೋಕ ವೀರನಾಯಕ ಖಂಡನೆ

ಕಲಬುರಗಿ ;ಜ.24: ನಗರದ ಹೊರವಲಯದಲ್ಲಿರುವ
ಕೋಟನೂರ(ಡಿ) ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಹಾಗೂ ಸರ್ವ ಸಮುದಾಯಗಳಿಗೆ ನ್ಯಾಯ ಒದಗಿಸಿದ ಬಾಬಾ ಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಅಪಮಾನ ಮಾಡಿ ಹೇಯ ಕೃತ್ಯ ಎಸಗಿದ ದುಷ್ಕರ್ಮಿಗಳ ಹೇಯ ಕೃತ್ಯ ತೀವ್ರವಾಗಿ ಖಂಡಿಸುತ್ತೇನೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಅಶೋಕ ವೀರನಾಯಕ ಹೇಳಿದರು.

ಈ ಹೀನ ಕೃತ್ಯದ ಹಿಂದೆ ಕಾಣದ ಯಾರ ಕೈವಾಡವಿದೆ ಎಂಬುದನ್ನು ಪೆÇೀಲಿಸ್ ಇಲಾಖೆ ಕೂಡಲೇ ಪತ್ತೆ ಹಚ್ಚುವ ಕೆಲಸ ಮಾಡಬೇಕು. ಆರೋಪಿಗಳನ್ನು ಆದಷ್ಟು ಬೇಗ ಬಂಧಿಸಿ ಕಠಿಣ ಕ್ರಮ ಕೈಗೊಂಡು ಇಂಥಹ ಘಟನೆಗಳು ಮರುಕಳಿಸದಂತೆ ಕ್ರಮ ಜಿಲ್ಲಾಡಳಿತ ಹಾಗೂ ಪೆÇೀಲಿಸ್ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.