
ಕಲಬುರಗಿ:ಏ.14: ಸಮ ಸಮಾಜವನ್ನು ನಿರ್ಮಿಸುವ ಮೂಲಕ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಆಶಯವನ್ನು ಸಾಕಾರಗೊಳಿಸಬೇಕು ಎಂದು ಕೇಂದ್ರ ಕಾರಾಗೃಹದ ಮುಖ್ಯಸ್ಥ ಡಾ. ಪಿ. ರಂಗನಾಥ್ ಅವರು ಹೇಳಿದರು.
ಕೇಂದ್ರ ಕಾರಾಗೃಹದಲ್ಲಿ ಶುಕ್ರವಾರ ಹಮ್ಮಿಕೊಂಡ ಡಾ. ಅಂಬೇಡ್ಕರ್ ಅವರ 132ನೇ ಜಯಂತಿ ಕಾರ್ಯಕ್ರಮದಲ್ಲಿ ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಹಾಗೂ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಅವರು, ಅಂಬೇಡ್ಕರ್ ಅವರ ಆಶಯದಂತೆ ಸಮ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಶಿಕ್ಷಣವನ್ನು ಪಡೆಯಬೇಕು. ಹಾಗಾಗಿ ನಾವೆಲ್ಲರೂ ಶಿಕ್ಷಣವನ್ನು ಪಡೆದು ಸಮ ಸಮಾಜದ ನಿಮಾರ್ಣ ಹಾಗೂ ಅಭಿವೃದ್ಧಿಗೆ ನಮ್ಮದೇ ಆದ ಕೊಡುಗೆಯನ್ನು ನೀಡುವ ಮೂಲಕ ನಿಜವಾದ ಅರ್ಥದಲ್ಲಿ ಡಾ. ಅಂಬೇಡ್ಕರ್ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದಂತೆ ಆಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧೀಕ್ಷಕ ಬಿ.ಎಂ. ಕೊಟ್ರೇಶ್, ಸಹಾಯಕ ಅಧೀಕ್ಷಕರಾದ ವಿ. ಕೃಷ್ಣಮೂರ್ತಿ, ಹುಸೇನಿ ಪೀರ್, ವೈದ್ಯಾಧಿಕಾರಿ ಡಾ. ಬಸವರಾಜ್ ಕಿರಣಗಿ, ಡಾ. ಅಣ್ಣಾರಾವ್ ಪಾಟೀಲ್, ಸಂಸ್ಥೆಯ ಎಲ್ಲ ಜೈಲರ್ ವೃಂದದವರು, ಸಿಬ್ಬಂದಿಗಳು ಹಾಗೂ ಕಾರಾಗೃಹದ ಎಲ್ಲ ಬಂಧಿಗಳು ಪಾಲ್ಗೊಂಡಿದ್ದರು.