
ಕಲಬುರಗಿ,ಆ.11: ಜೇವರ್ಗಿ ಶಾಸಕ ಡಾ: ಅಜಯಸಿಂಗ್ ಅವರು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಆಗಸ್ಟ್ 14ರಂದು ನಗರಕ್ಕೆ ಪ್ರಥಮ ಬಾರಿಗೆ ಆಗಮಿಸುತ್ತಿರುವ ಪ್ರಯುಕ್ತ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸನ್ಮಾನ್ಯರ ಅದ್ಧೂರಿ ಸ್ವಾಗತಕ್ಕಾಗಿ ಪೂರ್ವಸಿದ್ಧತಾ ಸಭೆಯನ್ನು ಆಗಸ್ಟ್ 12ರಂದು ಸಂಜೆ 4 ಗಂಟೆಗೆ ಪಕ್ಷದ ಕಚೇರಿಯಲ್ಲಿ ಕರೆಯಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಜಗದೇವ್ ಗುತ್ತೇದಾರ್ ಕಾಳಗಿ ಅವರು ತಿಳಿಸಿದ್ದಾರೆ.
ಸಭೆಗೆ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ ಮಾಜಿ ಸಂಸದರು, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರು, ಡಿಸಿಸಿ ಡೇಲಿಗೇಟ್ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ ವಿವಿಧ ಮೂಂಚೂಣಿ ಘಟಕ/ವಿಭಾಗ/ಸೆಲ್‍ಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕಾಂಗ್ರೆಸ್ ಪಕ್ಷದ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಎಪಿಎಂಸಿಯ ಹಾಲಿ ಹಾಗೂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಮಹಾ ನಗರ ಪಾಲಿಕೆಯ ಮಾಜಿ ಮಹಾಪೌರರು, ಉಪ ಮಹಾಪೌರರು ಹಾಗೂ ಹಾಲಿ ಮತ್ತು ಮಾಜಿ ಸದಸ್ಯರುಗಳು, ಮಹಿಳೆಯರು, ಯುವಕರು ಕಾಂಗ್ರೆಸ್ ಪಕ್ಷದ ಎಲ್ಲ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಆಗಮಿಸಬೇಕೆಂದು ಅವರು ಕೋರಿದ್ದಾರೆ.