ಡಾ.ಕರವೀರಪ್ರಭು ಕ್ಯಾಲಕೊಂಡರಿಗೆ ಶ್ರೇಷ್ಠ ವೈದ್ಯಸಾಹಿತ್ಯ ಪ್ರಶಸ್ತಿ

ಕಲಬುರಗಿ ಡಿ 23: ಕಲಬುರಗಿಯ ಡಾ.ಪಿ.ಎಸ್.ಶಂಕರ ಪ್ರತಿಷ್ಠಾನವು ಜನವರಿ 1 ರಂದುಕೊಡಮಾಡುವ ಶ್ರೇಷ್ಠ ವೈದ್ಯ ಸಾಹಿತ್ಯ ಪ್ರಶಸ್ತಿಯನ್ನು ಈ ಬಾರಿ ಬಾಗಲಕೋಟೆ ಜಿಲ್ಲೆಯಬಾದಾಮಿ ತಾಲೂಕಿನ ಡಾ. ಕರವೀರ ಪ್ರಭು ಕ್ಯಾಲಕೊಂಡ ಅವರಿಗೆ ನೀಡಲು ಪ್ರತಿಷ್ಠಾನ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಅವರು ರಚಿಸಿದ ವೈದ್ಯಸಾಹಿತ್ಯದ ಮೇರು ಕನ್ನಡ ಕೃತಿ ಮೇರಾ ಭಾರತ ಮಧುಮೇಹ ಮಯಂ ಎಂಬ ಕೃತಿಗೆ ಶ್ರೇಷ್ಠ ವೈದ್ಯ ಸಾಹಿತ್ಯ ಪ್ರಶಸ್ತಿಯನ್ನು ನೀಡುವ ನಿರ್ಣಯ ಕೈಗೊಳ್ಳಲಾಯಿತು.
ಡಾ.ಕರವೀರ ಪ್ರಭು ಕ್ಯಾಲಕೊಂಡ ಅವರು ಕರ್ನಾಟಕ ರಾಜ್ಯ ವೈದ್ಯ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತ ಹಲವಾರು ವೈದ್ಯಕೀಯ ಪುಸ್ತಕಗಳನ್ನು ರಚಿಸಿದ್ದಾರೆ.ಅನೇಕಲೇಖನಗಳನ್ನು ಸಹಿತ ಬರೆದಿದ್ದಾರೆ. ಇವರು ಜಿಲ್ಲಾ ಆರೋಗ್ಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ನಿವೃತ್ತಿಯ ನಂತರ ಬಡಜನರಿಗಾಗಿ ಬಾದಾಮಿಯಲ್ಲಿ ಸ್ವಂತ ಆಸ್ಪತ್ರೆ ನಡೆಸುತ್ತಿದ್ದಾರೆ. ಡಾ.ಕರವೀರಪ್ರಭು ಕ್ಯಾಲಕೊಂಡ ಅವರು ವೈದ್ಯಕೀಯ ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಸಲ್ಲಿಸುತ್ತಿರುವ ಸೇವೆ ಅಪಾರವಾಗಿದೆ.
ಆದ್ದರಿಂದ ಡಾ.ಪಿ.ಎಸ್.ಶಂಕರ ಪ್ರತಿಷ್ಠಾನದ ವತಿಯಿಂದ ಜನವರಿ 1 ರಂದು ನಡೆಯುವ ಸಮಾರಂಭದಲ್ಲಿ 5000 ರೂ.ನಗದು ಪುರಸ್ಕಾರ, ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು ಎಂದು ಪ್ರತಿಷ್ಠಾನದ ಕಾರ್ಯದರ್ಶಿಗಳಾದ ನರೇಂದ್ರ ಬಡಶೇಷಿ ಅವರು ತಿಳಿಸಿದ್ದಾರೆ.