ಡಾ.ಕೆ.ಸಿ.ನಾರಾಯಣಗೌಡರಿಂದ ನಾಮಪತ್ರ ಸಲ್ಲಿಕೆ

ಕೆ.ಆರ್.ಪೇಟೆ. ಏ.18:- ಕೃಷ್ಣರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ.ಕೆ.ಸಿ.ನಾರಾಯಣಗೌಡ ಸೋಮವಾರ ಮಧ್ಯಾಹ್ನ 11.55ಕ್ಕೆ ತಾಲ್ಲೂಕು ಕಛೇರಿಗೆ ಆಗಮಿಸಿ ತಮ್ಮ ನಾಮಪತ್ರ ಸಲ್ಲಿಸಿದರು.
ತಮ್ಮ ಬೆಂಬಲಿಗರಾದ ಮೂಡಾ ಅಧ್ಯಕ್ಷ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷ ಎಸ್.ಅಂಬರೀಶ್ ಮತ್ತು ತಮ್ಮ ಪತ್ನಿ ದೇವಕಿ ಅವರೊಂದಿಗೆ ತಾಲೂಕು ಆಡಳಿತ ಸೌಧದಲ್ಲಿರುವ ಚುನಾವಣಾ ಕಛೇರಿಗೆ ಆಗಮಿಸಿದ ¸ಸಚಿವ ಕೆ.ಸಿ.ನಾರಾಯಣಗೌಡ ಚುನಾವಣಾ ಅಧಿಕಾರಿ ಕೃಷ್ಣಕುಮಾರ್ ಅವರಿಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು.
ಸಹಾಯಕ ಚುನಾವಣಾಧಿಕಾರಿ ನಿಸರ್ಗಪ್ರಿಯ ಉಪಸ್ಥಿತರಿದ್ದರು.
ಬೃಹತ್ ಮರವಣಿಗೆ:
ನಾಮಪತ್ರ ಸಲ್ಲಿಸಿದ ನಂತರ ಪಟ್ಟಣದ ಶ್ರೀರಂಗ ಚಿತ್ರಮಂದಿರದ ಬಳಿಯಿಂದ ಅಲಂಕೃತಗೊಂಡ ವಾಹನ ಏರಿದ ಸಚಿವ ನಾರಾಯಣಗೌಡ ಮತ್ತು ಮಗಳು ಹಾಗೂ ಧರ್ಮಪತ್ನಿ ದೇವಕಿ ಸೇರಿದಂತೆ ಹಲವು ಬಿಜೆಪಿ ಮುಖಂಡರೊಂದಿಗೆ ಮೆರವಣಿಗೆಯಲ್ಲಿ ಸಾಗಿದರು.
ಮತ್ತೊಂದು ವಾಹನದಲ್ಲಿ ತಮ್ಮ ಅಳಿಯ ಸೇರಿದಂತೆ ಬಿಜೆಪಿ ಮುಖಂಡರುಗಳು ತೆರೆದ ವಾಹನದಲ್ಲಿ ಮೆರವಣಿಗೆಯಲ್ಲಿ ಸಾಗಿದರು. ತಮ್ಮ ಸಾವಿರಾರು ಬೆಂಬಲಿಗರೊಂದಿಗೆ ಪಟ್ಟಣದ ಮುಖ್ಯರಸ್ತೆಯಲ್ಲಿ ಮೆರವಣಿಗೆಯ ಮೂಲಕ ತಾಲ್ಲೂಕು ಕಛೇರಿಯವರೆಗೂ ಸಾಗಿ ತಾಲ್ಲೂಕು ಕಛೇರಿಯ ಬಳಿ ಮೆರವಣಿಗೆಯನ್ನು ಮುಕ್ತಾಯಗೊಳಿಸಲಾಯಿತು.
ಮೆರವಣಿಗೆಯಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಬಿಜೆಪಿ ಬಾವುಟಗಳನ್ನು ಹಿಡಿದು ಸಾಗಿದರು. ಸಾವಿರಾರು ಬಿಜೆಪಿ ಕಾರ್ಯಕರ್ತರು ಏಕಕಾಲಕ್ಕೆ ಮೆರವಣಿಗೆಯಲ್ಲಿ ಸಾಗಿದ ಪರಿಣಾಮ ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಆಗಿ ವಾಹನ ಸವಾರರು ಸಂಕಷ್ಠ ಅನುಭವಿಸಿದರು.