ಡಾ. ಜಿ.ಎಸ್. ಯತೀಶ್ ಪ್ರಭಾರ ಪ್ರಾಂಶುಪಾಲರಾಗಿ ನೇಮಕ

ಸಂಜೆವಾಣಿ ವಾರ್ತೆ

ದಾವಣಗೆರೆ.ಜು.೭ ಬಾಪೂಜಿ ವಿದ್ಯಾಸಂಸ್ಥೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಲ್ಲಿನ ಆರ್.ಎಲ್. ಕಾನೂನು ಕಾಲೇಜಿನ ಪ್ರಭಾರ ಪ್ರಾಂಶುಪಾಲರಾಗಿ ಡಾ. ಜಿ.ಎಸ್. ಯತೀಶ್ ಅವರನ್ನು ನೇಮಕಗೊಳಿಸಲಾಗಿದೆ.ಅದೇ ರೀತಿ ಕಾಲೇಜಿನ ನಿರ್ವಹಣೆ ಪರಿಮಿತಿಗೊಳಪಡುವ ಬ್ಯಾಂಕ್ ಖಾತೆಗಳನ್ನು  ನಿರ್ವಹಿಸಲು ಪ್ರಭಾರ ಪ್ರಾಂಶುಪಾಲರಿಗೆ ಅಧಿಕಾರ ನೀಡಲಾಗಿದೆ ಎಂದು ಬಾಪೂಜಿ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ಡಾ. ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ.