ಡಾ.ಪಾಟೀಲ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲಿ: ರಾಜು ಹಡಪದ್ ಒತ್ತಾಯ

ಸೇಡಂ, ಮೇ,17: ಸರ್ವ ಜನಾಂಗದ ನೆಚ್ಚಿನ ನಾಯಕ ಕಲ್ಯಾಣ ಕರ್ನಾಟಕದಲ್ಲೇ ಅತಿ ಹೆಚ್ಚು ಮತಗಳಿಂದ ಗೆಲುವು ಸಾಧಿಸಿದ ಡಾ. ಶರಣಪ್ರಕಾಶ್ ಪಾಟೀಲ್ ಜೀ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವ ಜೊತೆಗೆ ಸಚಿವ ಸ್ಥಾನವನ್ನು ನೀಡಬೇಕೆಂದು ಕಾಂಗ್ರೆಸ್ ಪಕ್ಷದ ಮಾಜಿ ಪುರಸಭೆ ಸದಸ್ಯ ರಾಜು ಹಡಪದ್ ರಾಜ್ಯ ನಾಯಕರಿಗೆ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಕೋರಿರುವ ಅವರು ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದಾಗ ರಾಜ್ಯದಾದ್ಯಂತ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡುವ ಮೂಲಕ ಕಡು ಬಡವರು ಅನುಕೂಲಕ್ಕಾಗಿ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಗಣನೀಯವಾಗಿ ಸುಧಾರಣೆ ತಂದಿದ್ದಾರೆ ಆದರಿಂದ ಈ ಬಾರಿಯೂ ಉಪಮುಖ್ಯಮಂತ್ರಿ ಜೊತೆಗೆ ಸಚಿವ ಸ್ಥಾನವನ್ನು ನೀಡಬೇಕೆಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಿಗೆ ಮನವಿ ಮಾಡಿಕೊಂಡಿದ್ದಾರೆ.