ಡಾ.ಪಾಟೀಲ್ ಗೆಲುವು ಕಾಂಗ್ರೆಸ್ಸಿನ ಮಹಿಳಾ ಮುಖಂಡರು ವಿಜಯೋತ್ಸವ

ಸೇಡಂ, ಮೇ,15: ಜಿದ್ದಾಜಿದ್ದಿನ ವಿಧಾನಸಭೆ ಚುನಾವಣೆಯಲ್ಲಿ 4ನೇ ಬಾರಿ ಶಾಸಕರಾಗಿ ಆಯ್ಕೆಯಾದ ಡಾ.ಶರಣಪ್ರಕಾಶ್ ಪಾಟೀಲ್ ಅವರ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಪಟ್ಟಣದ ಬಸವ ನಗರದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಯುವಕರು ಮಹಿಳೆಯರು ಮಕ್ಕಳು ಪಟಾಕಿ ಹಚ್ಚಿ ಪರಸ್ಪರ ಸ್ವೀಟ್ ತಿನ್ನಿಸುವ ಮೂಲಕ ವಿಜಯೋತ್ಸವ ಆಚರಿಸುವ ಮೂಲಕ ಸಂಭ್ರಮಿಸಿದರು.