ಡಾ.ಫ.ಗು.ಹಳಕಟ್ಟಿ ಜಯಂತಿ ಆಚರಣೆ

ಕಲಬುರಗಿ :ಜು.2: ನಗರದ ಮಹಾದೇವ ನಗರದಲ್ಲಿರುವ ಸ್ವಾತಿ, ಶಿವಾ ವಿದ್ಯಾ ಮಂದಿರ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಭಾನುವಾರ ಡಾ.ಫ.ಗು.ಹಳಕಟ್ಟಿ ಅವರ ಜಯಂತಿಯನ್ನು ‘ವಚನ ಸಂರಕ್ಷಣಾ ದಿನಾಚರಣೆ’ಯನ್ನಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಎಚ್.ಬಿ.ಪಾಟೀಲ, ನರಸಪ್ಪ ಬಿರಾದಾರ ದೇಗಾಂವ, ಶಿವಯೋಗಪ್ಪ ಬಿರಾದಾರ, ಚನ್ನಬಸಪ್ಪ ಗಾರಂಪಳ್ಳಿ, ಸಂಗೀತಾ ಸಿ.ಗಾರಂಪಳ್ಳಿ, ಮಲ್ಲಮ್ಮ ಭೈರಾಮಡಗಿ, ಪೂರ್ಣಿಮಾ, ಪ್ರೀತಿ, ಸಾವಿತ್ರಿ ಎನ್.ಪಾಟೀಲ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.