
ಬೀದರ, ಏ. 05 : ಡಾ. ಬಾಬು ಜಗಜೀವನರಾಂ ಜಯಂತಿ ಆಚರಿಸಿದರೆ ಸಾಲದು ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವು ಸಾಗಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ ಹೇಳಿದರು.
ಅವರು ಬುಧವಾರ ಡಾ. ಬಾಬು ಜಗಜೀವನರಾಂ ಜಯಂತಿ ಅಂಗವಾಗಿ ಬೀದರ ನಗರದಲ್ಲಿ ಜಗಜೀವನರಾಂ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಮಾತನಾಡಿದರು.
ಭಾರತದ ಹಸಿರು ಕ್ರಾಂತಿಯ ಹರಿಕಾರರಾಗಿದ್ದ ಜಗಜೀವನರಾಂ ಅವರು ದೇಶಕ್ಕೆ ತಮ್ಮದೆಯಾದ ಕೊಡುಗೆ ನೀಡಿದ್ದಾರೆ. ಅಂತಹ ಮಾಹಾ ನಾಯಕರ ಜಯಂತಿ ಇಂದು ಆಚರಿಸುತ್ತಿರುವುದು ನಮಗೆ ಸಂತಸದ ವಿಷಯವಾಗಿದೆ ಎಂದರು.
ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆಯ ನೀತಿ ಸಂಹಿತೆ ರಾಜ್ಯದಲ್ಲಿ ಜಾರಿಯಲ್ಲಿರುವುದರಿಂದ ಇಂದು ಈ ಜಯಂತಿಯನ್ನು ಸರಳವಾಗಿ ಆಚರಿಸಲಾಗುತ್ತಿದೆ ತಮ್ಮೆಲ್ಲರ ಸಹಕಾರದಿಂದ ಸರಳವಾಗಿ ಈ ಜಯಂತಿಯನ್ನು ಆಚರಿಸುತ್ತಿರುವ ತಮಗೆಲ್ಲರಿಗೂ ಡಾ. ಬಾಬು ಜಗಜೀವನರಾಂ ಜಯಂತಿ ಶುಭಾಶಯಗಳು ಎಂದು ಹೇಳಿದರು.
ಜಿಲ್ಲಾ ಪೆÇೀಲಿಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಅವರು ಮಾತನಾಡಿ, ಜಗಜೀವನರಾಂ ಅವರು ಸಾಮಾಜಿಕ ಸಮಾನತೆಗಾಗಿ ಶ್ರಮಿಸಿದ ನಾಯಕರಾಗಿದ್ದರು ಅವರ ತತ್ವ ಮತ್ತು ಸಿದ್ದಾಂತಗಳನ್ನು ಪಾಲಿಸುವ ಮೂಲಕ ನಾವೆಲ್ಲರೂ ಮುನ್ನಡೆಯಬೇಕೆಂದರು
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ, ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಗಿರೀಶ್ ಜೆ. ರಂಜೋಳಕರ, ಜಗಜೀವನರಾಂ ಸಮಾಜದ ಮುಖಂಡರಾದ ಚಂದ್ರಕಾಂತ ಹಿಪ್ಪಳಗಾಂವ, ರಾಜು ಕಡ್ಯಾಳ, ಫನಾರ್ಂಡೀಸ್ ಹಿಪ್ಪಳಗಾಂವ, ಶ್ಯಾಮಣ್ಣ ಬೆಂಬಳಗಿ, ಚಂದ್ರಕಾಂತ ಹಿಪ್ಪಳಗಾಂವ, ರಾಜು, ರಮೇಶ, ಮುಪ್ತಿ ಸೇರಿದಂತೆ ಹಲವಾರು ಜನರು ಉಪಸ್ಥಿತರಿದ್ದರು.