ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಮಾಜಿ ಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ದಿ. ಡಾ. ಬಾಬು ಜಗಜೀವನ ರಾಂ ಅವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಅವರು ಬಾಬು ಜಗಜೀವನರಾಂರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರ ಸೇವೆಯನ್ನು ಸ್ಮರಿಸಿದರು.