ಡಾ.ಬಾಬು ಜಗಜೀವನರಾಂ ಜಯಂತಿ ಸರಳ ಆಚರಣೆ

ದಾವಣಗೆರೆ; ಏ.6; ಜಿಲ್ಲಾಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಡಾ.ಬಾಬು ಜಗಜೀವನರಾಂ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
 ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ   ಡಾ.ಬಾಬುಜಗಜೀವನರಾಂ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ಪುಷ್ಪಾರ್ಚನೆ ಸಲ್ಲಿಸಿ ಶ್ರದ್ಧಾ ಹಾಗೂ ಭಕ್ತಿಪೂರ್ವಕವಾಗಿ  ನಮಿಸಿದರು.ವಿಧಾನಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿ ಇರುವುದರಿಂದ ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುರೇಶ ಹಿಟ್ನಾಳ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ನಾಗರಾಜ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಡಿ.ಡಿ ಮಂಜನಾಯ್ಕ್, ಅಲ್ಪ ಸಂಖ್ಯಾತ ವರ್ಗಗಳ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ, ದಲಿತ ಸಂಘಟನ ಸಮಿತಿ ಅಧ್ಯಕ್ಷ ಮಲ್ಲಪ್ಪ, ದಲಿತ ಸಂಘರ್ಷ ಸಮಿತಿ  ರಾಜ್ಯ ಸಂಘಟನಾ ಸಂಚಾಲಕ ಕಬ್ಬಳ್ಳಿ ಮೈಲಪ್ಪ, ಚಿದಾನಂದಪ್ಪ ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.