ಡಾ.ಬಾಬು ಜಗಜೀವನರಾಮ್‍ರವರ ತತ್ವ ಆದರ್ಶಗಳನ್ನ ಎಲ್ಲರೂ ಮೈಗೂಡಿಸಿಕೊಳ್ಳಬೇಕು: ಮಲ್ಲಿಕಾರ್ಜುನ್

ಸಂಜೆವಾಣಿ ವಾರ್ತೆ
ಚಾಮರಾಜನಗರ, ಜು.07:- ಡಾ. ಬಾಬು ಜಗಜೀವನರಾಮ್‍ರವರ ತತ್ವ ಆದರ್ಶಗಳನ್ನ ಎಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮಲ್ಲಿಕಾರ್ಜುನ್ ಕರೆ ನೀಡಿದರು.
ಅವರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರನಾಯಕ, ಮಾಜಿ ಉಪ ಪ್ರಧಾನಮಂತ್ರಿಗಳಾದ ಡಾ. ಬಾಬು ಜಗಜೀವನ್‍ರಾಮ್ ಅವರ 37ನೇ ಪುಣ್ಯ ಸ್ಮರಣೆ ಸರಳ ಕಾರ್ಯಕ್ರಮದಲ್ಲಿ ಮಾತನಾಡಿ, ಡಾ. ಬಾಬು ಜಗಜೀವನರಾಮ್‍ರವರ ತತ್ವ ಆದರ್ಶಗಳನ್ನ ಎಲ್ಲರೂ ಮೈಗೂಡಿಸಿಕೊಳ್ಳಬೇಕು. ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನ್‍ರಾಮ್ ಅವರು ನೀಡಿರುವ ಸಂದೇಶ ಆಶಯಗಳನ್ನು ಪಾಲನೆ ಮಾಡಬೇಕು. ಅವರ ಸಂದೇಶಗಳು ಕಾನೂನಾತ್ಮಕವಾಗಿ ಹಾಗೂ ಆಡಳಿತಾತ್ಮಕವಾಗಿ ಕಾರ್ಯನಿರ್ವಹಿಸಲು ಸಹಕಾರಿಯಾಗಿವೆ ಎಂದರು.
ಜಿಲ್ಲೆಯಲ್ಲಿ ಈ ಬಾರಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ವಸತಿ ಶಾಲೆಗಳಿಗೆ ಪ್ರವೇಶ ಪಡೆದಿದ್ದಾರೆ. ಸಮುದಾಯದ ವಿದ್ಯಾರ್ಥಿಗಳು ಸರ್ಕಾರದ ಸವಲತ್ತುಗಳನ್ನು ಸದುಪಯೋಗಪಡಿಸಿಕೊಂಡು ಆರ್ಥಿಕ ಮತ್ತು ಸಾಮಾಜಿಕವಾಗಿ ಬೆಳೆದು ದೇಶದಉನ್ನತ ಹುದ್ದೆಗಳನ್ನು ಅಲಂಕರಿಸುವಂತಾಗಬೇಕು ಎಂದು ಮಲ್ಲಿಕಾರ್ಜುನ್ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಎಸ್. ಪೂವಿತಾ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಅವರುಜ್ಯೋತಿ ಬೆಳಗಿಸಿ ಡಾ. ಬಾಬು ಜಗಜೀವನ್‍ರಾಮ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಕಾರ್ಯಕ್ರಮಕ್ಕೂ ಮೊದಲು ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಜಿಲ್ಲಾಧಿಕಾರಿ ಎಸ್. ಪೂವಿತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಇತರೆಗಣ್ಯರು ಮಾಲಾರ್ಪಣೆ ಮಾಡಿ ನಮಿಸಿದರು.
ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.