ಡಾ. ಬಾಬು ಜಗಜೀವನರಾಮ್ ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ ಮಹಾನ್ ವ್ಯಕ್ತಿ

ಗದಗ,ಏ6: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಗದಗ-ಬೆಟಗೇರಿ ನಗರಸಭೆ ಹಾಗೂ ಗದಗ ಜಿಲ್ಲೆಯ ವಿವಿಧ ದಲಿತ ಸಂಘಟನೆಗಳು ಇವರ ಸಂಯುಕ್ತ ಆಶ್ರಯದಲ್ಲಿ ಹಸಿರು ಕ್ರಾಂತಿಯ ಹರಿಕಾರ ಮತ್ತು ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್ ಅವರ 114 ನೇ ಜಯಂತಿಯನ್ನು ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಡಾ. ಬಾಬು ಜಗಜೀವನರಾಮ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸಮರ್ಪಿಸಿದರು.
ನಂತರ ಮಾತನಾಡಿದ ಅವರು, ಡಾ. ಬಾಬು ಜಗಜೀವನರಾಮ್ ಅವರು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ ಮಹಾನ್ ವ್ಯಕ್ತಿಯಾಗಿದ್ದಾರೆ. ಇವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಸದೃಢ ದೇಶದ ನಿರ್ಮಾಣ ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸತೀಶಕುಮಾರ್ ಎಂ, ತಹಶೀಲ್ದಾರರಾದ ಶ್ರೀನಿವಾಸ ಮೂರ್ತಿ ಕುಲಕರ್ಣಿ, ನಗರಸಭೆ ಪೌರಾಯುಕ್ತರಾದ ರಮೇಶ ಜಾಧವ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಪೆÇ್ರ. ಕೆ.ಎಚ್. ಬೇಲೂರ, ಎಸ್.ಎನ್. ಬಳ್ಳಾರಿ, ವಿವಿಧ ದಲಿತ ಸಂಘಟನೆಗಳ ಮುಖಂಡರು, ವಿವಿಧ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಹಾಜರಿದ್ದರು.