ಡಾ.ಬಾಬು ಜಗಜೀವನ್‍ರಾಂ ಕೊಡುಗೆ ಅಪಾರ

ಚಿತ್ರದುರ್ಗ.ಏ.೬; ಉಪ ಪ್ರಧಾನಿ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್‍ರಾಂ ಅವರು ಎಲ್ಲಾ ಕ್ಷೇತ್ರಗಳಿಗೂ ಅಪಾರ ಕೊಡುಗೆ ನೀಡಿದ ಮಹಾನ್ ನಾಯಕರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಹೇಳಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ ಡಾ.ಬಾಬು ಜಗಜೀವನ್‍ರಾಂ ಅವರ 116ನೇ ಜನ್ಮ ದಿನಾಚರಣೆಯಲ್ಲಿ ಡಾ.ಬಾಬು ಜಗಜೀವನ್‍ರಾಂ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.ಡಾ.ಬಾಬು ಜೀವನ್‍ರಾಂ ಅವರು ಹಲವಾರು ವಿಷಯಗಳಲ್ಲಿ ಬದಲಾವಣೆ ಹಾಗೂ ಬಹಳಷ್ಟು ಕ್ಷೇತ್ರಗಳಲ್ಲಿಯೂ ಬೆಳೆವಣಿಗೆಗೆ ಶ್ರಮಿಸಿ ಹಸಿರು ಕ್ರಾಂತಿಯ ಹರಿಕಾರ ಎನಿಸಿಕೊಂಡಿದ್ದಾರೆ.  ಈ ಮೂಲಕ ದೇಶಕ್ಕೆ ಅಪಾರವಾದ ಕೊಡುಗೆ ನೀಡಿ, ನಮಗೆ ದಾರಿದೀಪವಾಗಿದ್ದಾರೆ ಎಂದರು.